ಶಾಶ್ವತ ವಾಸಸ್ಥಳ ಪ್ರಮಾಣ ಪತ್ರ ಚುನಾವಣಾ ಆಯೋಗ ಅಂತಿಮ‌ ನಿರ್ಧಾರ ಕೈಗೊಳ್ಳಲಿ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ

Jul 11, 2026 - 18:20
 0  205
ಶಾಶ್ವತ ವಾಸಸ್ಥಳ ಪ್ರಮಾಣ ಪತ್ರ ಚುನಾವಣಾ ಆಯೋಗ ಅಂತಿಮ‌ ನಿರ್ಧಾರ ಕೈಗೊಳ್ಳಲಿ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ

ಮಡಿಕೇರಿ: ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿರುವ ಹೊತ್ತಿನಲ್ಲಿ ರಾಜ್ಯ ಸರ್ಕಾರ ಶಾಶ್ವತ ವಾಸಸ್ಥಳ ಪ್ರಮಾಣ ಪತ್ರ ನೀಡಲು ಹೊರಟಿರುವುದು ವಿವಾದಕ್ಕೆ ಕಾರಣವಾಗಿದ್ದು, ಈ ವಿಷಯದ ಬಗ್ಗೆ ಚುನಾವಣಾ ಆಯೋಗವೇ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜಾ ಉತ್ತಪ್ಪ ಆಗ್ರಹಿಸಿದ್ದಾರೆ.

ಎಸ್‌ಐಆರ್‌ನಿಂದ ಯಾವುದೇ ಅರ್ಹ ಮತದಾರರು ಹೆಸರು ಕಳೆದುಕೊಳ್ಳಬಾರದು. ಅದಕ್ಕಾಗಿ ಅರ್ಹರಿಗೆ ವಾಸಸ್ಥಳ ದೃಢೀಕರಣ ನೀಡುವ ಉದ್ದೇಶವಿದೆ. ಆದರೆ ತಹಶೀಲ್ದಾರ್ ಕಚೇರಿಗೆ ಜನರು ಅಲೆಯುವುದನ್ನು ತಪ್ಪಿಸಲು ಗ್ರಾಮ ಪಂಚಾಯ್ತಿ ಮಟ್ಟದಲ್ಲೇ ಪಿಆರ್‌ಸಿ ನೀಡುವ ವ್ಯವಸ್ಥೆ ಮಾಡಬೇಕುಎಂದು ಒತ್ತಾಯಿಸಿದರು. ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷರು ಮತ್ತು ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್, ಜಿಲ್ಲಾ ವಾರ್ ರೂಮ್ ಅಧ್ಯಕ್ಷರಾದ ತೆನ್ನಿರ ಮೈನಾ, ಮಡಿಕೇರಿ ಬ್ಯಾಕ್ ಕಾಂಗ್ರೆಸ್ ಅಧ್ಯಕ್ಷ ಕೊಟ್ಟಮುಡಿ ಹಂಸ, ಪ್ರಮುಖರಾದ ಕೊಲ್ಯದ ಗಿರೀಶ್, ಸೂರಜ್ ಹೊಸೂರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0