ನ್ಯಾಯಾಲಯದ ಹೊರಗೆ ಮತದಾರರ ಮಧ್ಯೆ ರಾಜಕೀಯ ಹೋರಾಟಗಳು ನಡೆಯಲಿ!: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ವಿರುದ್ಧ ED ನೀಡಿದ್ದ ಮೇಲ್ಮನವಿ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ವಿರುದ್ಧ ಜಾರಿ ನಿರ್ದೇಶನಾಲಯ (ED) ನೀಡಿದ್ದ ಸಮನ್ಸ್ ರದ್ದುಗೊಳಿಸಿದ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ. ಈ ವೇಳೆ ಮುಖ್ಯ ನ್ಯಾಯಮೂರ್ತಿ (CJI) ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರಿದ್ದ ಪೀಠವು ಗಂಭೀರವಾಗಿ ಪ್ರತಿಕ್ರಿಯಿಸಿ, "ನ್ಯಾಯಾಲಯದ ಹೊರಗೆ ಮತದಾರರ ಮಧ್ಯೆ ರಾಜಕೀಯ ಮಧ್ಯೆ ರಾಜಕೀಯ ಹೋರಾಟಗಳು ನಡೆಯಲಿ, ಅದಕ್ಕಾಗಿ ಈಡಿಯನ್ನು ಏಕೆ ಉಪಯೋಗಿಸುತ್ತಿದ್ದಾರೆ?" ಎಂದು ಪ್ರಶ್ನಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.