ಹೆಬ್ಬಾಲೆಯ ಸೇಕ್ರೆಡ್ ಹಾರ್ಟ್ ಶಾಲೆಯಲ್ಲಿ ಅಕ್ಷರಾಭ್ಯಾಸ ಕಾರ್ಯಕ್ರಮ

Jun 30, 2026 - 14:23
 0  199
ಹೆಬ್ಬಾಲೆಯ ಸೇಕ್ರೆಡ್ ಹಾರ್ಟ್ ಶಾಲೆಯಲ್ಲಿ ಅಕ್ಷರಾಭ್ಯಾಸ ಕಾರ್ಯಕ್ರಮ

ಕುಶಾಲನಗರ, ಜೂ.29: ಕುಶಾಲನಗರ ಸಮೀಪದ ಹೆಬ್ಬಾಲೆಯ ಸೇಕ್ರೆಡ್ ಹಾರ್ಟ್ ಶಾಲೆಯಲ್ಲಿ ಸೋಮವಾರ ಅಕ್ಷರಾಭ್ಯಾಸ ಕಾರ್ಯಕ್ರಮ ನಡೆಯಿತು .

ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಚಿತ್ರಕಲಾ ಶಿಕ್ಷಕ ಉ. ರಾ. ನಾಗೇಶ್ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ, ಮಕ್ಕಳನ್ನು ಒಳ್ಳೆಯ ಸಂಸ್ಕಾರ ನೀಡಿ ಬೆಳೆಸುವ ರೀತಿ, ವಿದ್ಯಾಭ್ಯಾಸದ ಮಹತ್ವದ ಬಗ್ಗೆ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಿ.ಟಿ.ಸಿ. ಅಧ್ಯಕ್ಷ ಮಂಜುನಾಥ್ ವಹಿಸಿದ್ದರು.

ಎಚ್.ಎನ್. ನಂಜುಂಡ ಆಚಾರ್ ಮತ್ತು ರವೀಶ್ ಪೌರೊಹಿತ್ಯ ನೆರವೇರಿಸಿದರೆ, ದಯಾನಂದ್ (CRP ಹೆಬ್ಬಾಲೆ ಕ್ಲಸ್ಟರ್), ಶಾಲೆಯ ವ್ಯವಸ್ಥಾಪಕ ಎಚ್.ಎಸ್. ಲೋಕೇಶ್ , ವರಮಹಾಲಕ್ಷ್ಮಿ , ಶಾಲೆಯ ಮುಖ್ಯ ಶಿಕ್ಷಕಿ ಲೇಖಾ ಜಾನ್, ಸಹ ಶಿಕ್ಷಕರು, ಮಕ್ಕಳ ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0