Kodagu

ಲವ್ ಜಿಹಾದ್ ಆರೋಪ;ಸಿದ್ದಾಪುರದಲ್ಲಿ ಪ್ರತಿಭಟನೆ

admincoorgdaily

ಲವ್ ಜಿಹಾದ್ ಆರೋಪ;ಸಿದ್ದಾಪುರದಲ್ಲಿ ಪ್ರತಿಭಟನೆ

ಸಿದ್ದಾಪುರ: ಲವ್ ಜಿಹಾದ್ ಹಾಗೂ ಲ್ಯಾಂಡ್ ಜಿಹಾದ್ ವಿರುದ್ಧ ಹಿಂದೂಗಳು ಜಾಗೃತರಾಗಬೇಕು ಎಂದು ಹಿಂದೂ ಸುರಕ್ಷಾ ಸಮಿತಿ ಸಂಯೋಜಕ ಕುಕ್ಕೇರ ಅಜಿತ್ ಕರೆ ನೀಡಿದರು.

ಲವ್ ಜಿಹಾದ್ ಮತ್ತು ಮತಾಂತರ ಪ್ರಕರಣವನ್ನು ಖಂಡಿಸಿ ಸಿದ್ದಾಪುರ ಬಸ್ ನಿಲ್ದಾಣದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರೀತಿ ಪ್ರೇಮದ ನಾಟಕವಾಡಿ ಹಿಂದೂ ಯುವತಿಯರನ್ನು ಲವ್ ಜಿಹಾದ್ ಮಾಡಲಾಗುತ್ತಿದೆ ಎಂದು ಆರೋಪಿಸಿದ ಅವರು, ಕೊಡಗು ಜಿಲ್ಲೆಯಲ್ಲಿ ಲ್ಯಾಂಡ್ ಜಿಹಾದ್ ನಡೆಯುತ್ತಿದ್ದು, ಈ ಬಗ್ಗೆ ಹಿಂದೂ ಸಮುದಾಯ ಜಾಗೃತಿಯಿಂದರಬೇಕೆಂದರು.

ಪುತ್ತೂರಿನ ಗುಣರಾಜ್ ಭಟ್ ಮಾತನಾಡಿ, ಲವ್ ಜಿಹಾದ್ ಪ್ರಕರಣ ಕೇವಲ ಕೊಡಗು ಜಿಲ್ಲೆಗೆ ಮಾತ್ರ ಸೀಮಿತವಾಗಿಲ್ಲ. ಇಡೀ ದೇಶಾದ್ಯಂತ ಹಿಂದೂ ಹುಡುಗಿಯರನ್ನು ಗುರಿ ಮಾಡಲಾಗುತ್ತಿದೆ ಇಂತಹ ಪ್ರಕರಣಗಳ ಬಗ್ಗೆ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದರು. 

ಸಿದ್ದಾಪುರ ಅಯ್ಯಪ್ಪ ದೇವಸ್ಥಾನದ ಬಳಿಯಿಂದ ಸಿದ್ದಾಪುರ ಬಸ್ ನಿಲ್ದಾಣದವರೆಗೆ ಸುತ್ತಮುತ್ತಲ ಗ್ರಾಮಗಳಿಂದ ಆಗಮಿಸಿದ ನೂರಾರು ಮಂದಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭ ಉತ್ತಪ್ಪ, ರಮೇಶ್, ಅನಿತಾ ಪೂವಯ್ಯ, ಚಂದ್ರು,ಮಾಜಿ ಸಚಿವರಾದ ಎಂ ಪಿ ಅಪ್ಪಚ್ಚು ರಂಜನ್, ಮಾಜಿ ಸಭಾಪತಿ ಕೆ ಜಿ ಬೋಪಯ್ಯ ಸೇರಿದಂತೆ ಇನ್ನಿತರರು ಹಾಜರಿದ್ದರು.