Kodagu

ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ:ಎಂ.ಲಕ್ಷ್ಮಣ್ ಆರೋಪ

admincoorgdaily

ಮಡಿಕೇರಿ: ಮೈಸೂರು-ಕೊಡಗು ಲೋಕಸಭಾ ಚುನಾವಣೆಯಲ್ಲೂ ಮತಗಳ್ಳತನ ನಡೆದಿದೆ ಪರಾಜಿತ ಅಭ್ಯರ್ಥಿ ಹಾಗೂ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗಂಭೀರ ಆರೋಪ ಮಾಡಿದರು.ಮಡಿಕೇರಿ ನಗರದ ಅಂಬೇಡ್ಕರ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಲೋಕಸಭಾ ಚುನಾವಣೆಯಲ್ಲಿ ಬಹಳ ಲೋಪವಾಗಿದ್ದು, ಬಿಜೆಪಿ ಇವಿಎಂನಲ್ಲಿ ಮತಗಳ್ಳತನ ಮಾಡಿದೆ. ಒಟ್ಟು 2202 ಬೂತ್‌ಗಳ ಪೈಕಿ 292 ಬೂತ್‌ಗಳಲ್ಲಿ ಮತಗಳ್ಳತನ ಆಗಿದ್ದು, 292 ಇವಿಎಂ ಯಂತ್ರದಲ್ಲಿ ರಿಗ್ಗಿಂಗ್ ಆಗಿದೆ ಎಂದು ದೂರಿದರು. 292 ಬೂತ್‌ಗಳಲ್ಲಿ 1 ಲಕ್ಷದ 45 ಸಾವಿರ ಮತಗಳಿದ್ದು, ಅದರಲ್ಲಿ 22 ಸಾವಿರ ಮತ ಮಾತ್ರ ಕಾಂಗ್ರೆಸ್‌ಗೆ ಬಂದಿವೆ. ಕಳೆದ ನಾಲ್ಕು ಚುನಾವಣೆಯಲ್ಲಿ ಇದೇ ಬೂತ್‌ಗಳಲ್ಲಿ ಕಾಂಗ್ರೆಸ್‌ಗೆ ಶೇಕಡಾ 50-60 ಮತಗಳು ಬಂದಿದ್ದವು. ಒಂದು ಬೂತ್ ವ್ಯಾಪ್ತಿಯಲ್ಲಿ 15 ಮನೆ ಕಾಂಗ್ರೆಸ್ ಕಾರ್ಯಕರ್ತರದ್ದೇ ಆಗಿದೆ. ಅಲ್ಲಿ ಒಟ್ಟು 750 ಮತಗಳಿವೆ. ಆದರೆ ಕಾಂಗ್ರೆಸ್‌ಗೆ ಬಂದಿದ್ದು ಬರೀ ಏಳು ಮತ ಮಾತ್ರ. ಎನ್.ಆರ್.ಕ್ಷೇತ್ರದ ಶಾಂತಿ ನಗರದಲ್ಲೂ ಇದೇ ರೀತಿ ಆಗಿದೆ ಎಂದು ಗಂಭೀರ ಆರೋಪ ಮಾಡಿದರು.