ಮಡಿಕೇರಿ ಕ್ಷೇತ್ರದ ಶಾಸಕ‌ ಡಾ.ಮಂತರ್ ಗೌಡ ಅವರಿಗೆ ಸಚಿವ ಸ್ಥಾನ ನೀಡಲು ಎಂ.ಇ ಅಶ್ರಫ್ ಆಗ್ರಹ

May 31, 2026 - 12:11
 0  212
ಮಡಿಕೇರಿ ಕ್ಷೇತ್ರದ ಶಾಸಕ‌ ಡಾ.ಮಂತರ್ ಗೌಡ ಅವರಿಗೆ ಸಚಿವ ಸ್ಥಾನ ನೀಡಲು ಎಂ.ಇ ಅಶ್ರಫ್ ಆಗ್ರಹ

ಮಡಿಕೇರಿ; ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸಚಿವ ಸಂಪುಟದಲ್ಲಿ ಮಡಿಕೇರಿ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ. ಮಂತರ್ ಗೌಡ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ರಾಜ್ಯ ಸಂಘಟಿತ ಕಾರ್ಮಿಕರ ರಾಜ್ಯ ಕಾರ್ಯದರ್ಶಿ ಅಶ್ರಫ್ ಎಂ. ಈ. (ಸೋಮವಾರಪೇಟೆ) ಅವರು ರಾಜ್ಯ ಸರ್ಕಾರ ಹಾಗೂ ಪಕ್ಷದ ಹೈಕಮಾಂಡ್‌ಗೆ ಆಗ್ರಹಿಸಿದ್ದಾರೆ.

ಡಾ. ಮಂತರ್ ಗೌಡ ಅವರು ಜನಸೇವೆಯಲ್ಲಿ ತೊಡಗಿಸಿಕೊಂಡಿರುವ ಸಮರ್ಥ ನಾಯಕನಾಗಿದ್ದು, ಮಡಿಕೇರಿ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡುತ್ತಿದ್ದಾರೆ. ಎಲ್ಲಾ ವರ್ಗದ ಜನರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಅವರು ಸಚಿವ ಸಂಪುಟದಲ್ಲಿ ಸ್ಥಾನ ಪಡೆದರೆ ಕೊಡಗು ಜಿಲ್ಲೆ ಸೇರಿದಂತೆ ರಾಜ್ಯದ ಅಭಿವೃದ್ಧಿಗೆ ಮತ್ತಷ್ಟು ಶಕ್ತಿ ಸಿಗಲಿದೆ ಎಂದು ಅಶ್ರಫ್ ಎಂ. ಈ. ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲೆಯ ಜನರ ಆಶೋತ್ತರಗಳನ್ನು ಈಡೇರಿಸಲು ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಡಾ. ಮಂತರ್ ಗೌಡ ಅವರಿಗೆ ಸಚಿವ ಸ್ಥಾನ ನೀಡುವುದು ಸೂಕ್ತ ನಿರ್ಧಾರವಾಗಲಿದೆ ಎಂದು ಅವರು ತಿಳಿಸಿದ್ದಾರೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0