ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಸಾಧನ ಸಲಕರಣೆ ವಿತರಿಸಿದ ಶಾಸಕ ಎ.ಎಸ್ ಪೊನ್ನಣ್ಣ

ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಸಾಧನ ಸಲಕರಣೆ ವಿತರಿಸಿದ ಶಾಸಕ ಎ.ಎಸ್ ಪೊನ್ನಣ್ಣ

ವಿರಾಜಪೇಟೆ: ಸರಕಾರಿ ಮಾದರಿ ಪ್ರಾಥಮಿಕ ಶಾಲೆ ವಿರಾಜಪೇಟೆಯಲ್ಲಿ, 2025-26 ನೇ ಸಾಲಿನಲ್ಲಿ ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗೆ ಸಾಧನ ಸಲಕರಣೆಯನ್ನು ವಿತರಿಸಲಾಯಿತು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಈ ಸೌಲಭ್ಯದಲ್ಲಿ ಆಯ್ಕೆಯಾದ ಮಕ್ಕಳಿಗೆ ಸಾಧನ ಸಲಕರಣೆಗಳನ್ನು ವಿತರಿಸಿದರು.

ಬಳಿಕ ಮಾತನಾಡಿದ ಶಾಸಕರು, ಸಮಾಜದಲ್ಲಿ ಎಲ್ಲರೂ ಮುಂದೆ ಬರಬೇಕೆಂಬ ಮಹತ್ವಾಕಾಂಕ್ಷೆ ಸರಕಾರಕ್ಕೆ ಇದೆ. ಅದಕ್ಕಾಗಿ ವಿಶೇಷ ಸೌಲಭ್ಯ ವಂಚಿತ ಮಕ್ಕಳನ್ನು ಗುರುತಿಸಿ ಅವರನ್ನು ಸಮಾಜದ ಮುನ್ನಡೆಗೆ ತರಲು ಸಹಕಾರಿಯಾಗಲು ಇಂತಹ ಕಾರ್ಯಕ್ರಮಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಹಮ್ಮಿಕೊಂಡಿದೆ. ಅಧಿಕಾರಿಗಳು ಇಂತಹ ಮಕ್ಕಳನ್ನು ಗುರುತಿಸಿ ಸರಕಾರ ಹಾಗೂ ಶಾಸಕರ ಗಮನಕ್ಕೆ ತಂದಲ್ಲಿ ಅವರಿಗೆ ಬೇಕಾದ ಎಲ್ಲಾ ಸೌಕರ್ಯಗಳನ್ನು ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದು ಇದೇ ಸಂದರ್ಭದಲ್ಲಿ ಶಾಸಕರು ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ವಿರಾಜಪೇಟೆ ಪುರಾಸಭೆ ಉಪಾಧ್ಯಕ್ಷೆ ಫಸಿಯಾ ತಬ್ಸುಂ, ಹಾಗೂ ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಇಲಾಖೆಯ ಅಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು.