ವಿರಾಜಪೇಟೆ ಕೊಡವ ಸಮಾಜದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅಭಿನಂದಿಸಿದ ಶಾಸಕ ಎ.ಎಸ್ ಪೊನ್ನಣ್ಣ
ವಿರಾಜಪೇಟೆ:ಇತ್ತೀಚೆಗೆ ವಿರಾಜಪೇಟೆಯ ಕೊಡವ ಸಮಾಜದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ, ಅಧ್ಯಕ್ಷರಾಗಿ ಆಯ್ಕೆಯಾದ ಅಮಣಿಚಂಡ ರವಿ ಉತ್ತಪ್ಪ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಕಾಣತಂಡ ಜಗದೀಶ್ (ಜಗ್ಗ) ರವರು ಇಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರನ್ನು ಅವರ ಮನೆಯಲ್ಲಿ ಭೇಟಿಯಾದರು. ಅತ್ಯಂತ ಜಿದ್ದಾಜಿದ್ದಿನಿಂದ ನಡೆದ ಚುನಾವಣೆಯಲ್ಲಿ, ಜಯಗಳಿಸಿದ ಇಬ್ಬರನ್ನು ಶಾಸಕರು ಅಭಿನಂದಿಸಿ ಶುಭ ಕೋರಿದರು. ಈ ಸಂದರ್ಭ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ ಆಮಂಡ ತಿಮ್ಮಯ್ಯ ರವರು ಉಪಸಿತರಿದ್ದರು.