Kodagu

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ, ಆಯ್ಕೆಯಾದ ಅಭ್ಯರ್ಥಿಗಳಿಗೆ ಆದೇಶ ಪತ್ರ ವಿತರಿಸಿದ ಶಾಸಕ ಎ.ಎಸ್ ಪೊನ್ನಣ್ಣ

admincoorgdaily

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ, ಆಯ್ಕೆಯಾದ ಅಭ್ಯರ್ಥಿಗಳಿಗೆ ಆದೇಶ ಪತ್ರ ವಿತರಿಸಿದ ಶಾಸಕ ಎ.ಎಸ್ ಪೊನ್ನಣ್ಣ

ವಿರಾಜಪೇಟೆ;ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಪೊನ್ನಂಪೇಟೆ, ವಿರಾಜಪೇಟೆ, ಮಡಿಕೇರಿ ತಾಲೂಕು ಅಂಗನವಾಡಿಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗೆ, ಆಯ್ಕೆಯಾದ ಅಭ್ಯರ್ಥಿಗಳಿಗೆ ಇಂದು ಮಾನ್ಯ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಆದೇಶ ಪತ್ರ ವಿತರಿಸಿದರು.

 25 ಅಂಗನವಾಡಿ ಕಾರ್ಯಕರ್ತೆ, ಹಾಗೂ 34 ಅಂಗನವಾಡಿ ಸಹಾಯಕಿಯರಿಗೆ ಆದೇಶ ಪತ್ರ ನೀಡುತ್ತಾ ಶುಭಕೋರಿದ ಮಾನ್ಯ ಶಾಸಕರು, ಎಲ್ಲರೂ ದೊರಕಿದ ಅವಕಾಶವನ್ನು ಸತಪಯೋಗಪಡಿಸಿಕೊಂಡು ಉತ್ತಮ ರೀತಿಯಲ್ಲಿ ಕೆಲಸ ಮಾಡುವಂತೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಸಿ ಡಿ ಪಿ ಅಧಿಕಾರಿಗಳು, ವಿನೋದ್ ನಾಣಯ್ಯ,ಸುಬೀರ್, ತುಳಸಿ ಗಾಂಧಿ ಪ್ರಸದ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.