ವಿರಾಜಪೇಟೆ ಕ್ಷೇತ್ರದ ಕ್ರಿಶ್ಚಿಯನ್ ಸಮುದಾಯದ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಬಿಡುಗಡೆಗೊಳಿಸಿದ ಸಚಿವ ಜಮೀರ್ ಅಹ್ಮದ್ ಅವರನ್ನು ಸನ್ಮಾನಿಸಿದ ಶಾಸಕ ಎ.ಎಸ್ ಪೊನ್ನಣ್ಣ

ವಿರಾಜಪೇಟೆ ಕ್ಷೇತ್ರದ ಕ್ರಿಶ್ಚಿಯನ್ ಸಮುದಾಯದ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಬಿಡುಗಡೆಗೊಳಿಸಿದ ಸಚಿವ ಜಮೀರ್ ಅಹ್ಮದ್ ಅವರನ್ನು ಸನ್ಮಾನಿಸಿದ ಶಾಸಕ ಎ.ಎಸ್ ಪೊನ್ನಣ್ಣ

ಬೆಂಗಳೂರು: ಸೆ.25 ರಂದು ಬೆಂಗಳೂರಿನ ವಸಂತನಗರದಲ್ಲಿ ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕ್ರಿಶ್ಚಿಯನ್ ಸಮುದಾಯದ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಿದ ವಸತಿ ಸಚಿವರನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಕೃತಜ್ಞತಾಪೂರ್ವಕವಾಗಿ ಸನ್ಮಾನಿಸಿದರು.

ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ವಸತಿ ಸಚಿವರು, ಎ.ಎಸ್ ಪೊನ್ನಣ್ಣ ರವರ ಕಾರ್ಯ ವೈಕರಿಯನ್ನು ಮುಕ್ತ ಕಂಠದಿಂದ ಹೊಗಳಿದರಲ್ಲದೆ, ಎ ಎಸ್ ಪೊನ್ನಣ್ಣ ರವರನ್ನು ಸನ್ಮಾನಿಸಿ ಯಶಸ್ಸನ್ನು ಕೋರಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕ್ರಿಶ್ಚಿಯನ್ ಕಮ್ಯೂನಿಟಿ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ಅಧ್ಯಕ್ಷರಾದ ಡಾ ಎಸ್ ಜಾಫೆಟ್ ಕರ್ನಾಟಕ ಕ್ರಿಶ್ಚಿಯನ್ ಕಮ್ಯೂನಿಟಿ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾದ ಆಂಟೋನಿ ಮಾರಿಯ ಇಮ್ಯಾನ್ಯುಎಲ್, ವಿರಾಜಪೇಟೆ ತಾಲೂಕಿನ ಧರ್ಮ ಗುರುಗಳು, ಕಾಂಗ್ರೆಸ್ ಮುಖಂಡರುಗಳಾದ ಜೋಕಿಮ್, ಜಾನ್ಸನ್, ಬಾಬು, ರೋಬಿನ್, ಅಂಟೋನಿ, ರಫೀಕ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.