ನಿವೇಶನ ಒದಗಿಸಲು ಸ್ಥಳ ಪರಿಶೀಲನೆ ನಡೆಸಿದ ಶಾಸಕ ಎ.ಎಸ್ ಪೊನ್ನಣ್ಣ
ವಿರಾಜಪೇಟೆ: ಪುರಸಭಾ ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪ ಸಂದರ್ಭ ಮನೆ ಕಳೆದುಕೊಂಡ ಹಾಗೂ ಈ ಭಾಗದಲ್ಲಿ ಇರುವ ನಿರಾಶ್ರಿತರಿಗೆ ನಿವೇಶನ ಒದಗಿಸುವ ಸಲುವಾಗಿ, ಇಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಪುರಸಭಾ ವ್ಯಾಪ್ತಿಯಲ್ಲಿರುವ ವಿರಾಜಪೇಟೆ ಸುತ್ತಮುತ್ತ ಭಾಗದಲ್ಲಿ ಸ್ಥಳ ಪರಿಶೀಲನೆ ನಡೆಸಿದರು.
ಇಲ್ಲಿಯ ಸರಕಾರಿ ಜಾಗದಲ್ಲಿ ನಿರಾಶ್ರಿತರಿಗೆ ನಿವೇಶನ ಒದಗಿಸಲು ಈ ಹಿಂದೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು ಇಂದು ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಶಾಸಕರು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ನಗರ ಕಾಂಗ್ರೆಸ್ ಅಧ್ಯಕ್ಷರು ಮದಂಡ ತಿಮ್ಮಯ್ಯ, ಪುರಸಭೆ ಅಧ್ಯಕ್ಷರಾದ ದೇಚಮ್ಮ ಕಾಳಪ್ಪ, ಉಪಾಧ್ಯಕ್ಷೆ ಫಸಿಯಾ ತಬ್ಸುಂ, ಸದಸ್ಯರು, ತಹಶೀಲ್ದಾರ್ ಪ್ರವೀಣ್, ಕಂದಾಯ ಅಧಿಕಾರಿ ಹರೀಶ್, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು