ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಎ.ಎಸ್ ಪೊನ್ನಣ್ಣ

ಮಡಿಕೇರಿ: ತಾಲೂಕಿನ ಮೇಕೇರಿ ಗ್ರಾ.ಪಂ.ವ್ಯಾಪ್ತಿಯ ಮೇಕೇರಿ- ಬಿಳಿಗೇರಿಯಿಂದ ತೋರಮಣ ಲಿಂಕ್ ರಸ್ತೆ ಹಾಗೂ ಬಿಳಿಗೇರಿ ಶಾದಿಮಾಲ್ ರಸ್ತೆ 20 ಲಕ್ಷ ರೂ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಂಗಳವಾರ ಉದ್ಘಾಟಿಸಿದರು.ಹಾಗೆಯೇ ಹಾಕತ್ತೂರು ಗ್ರಾ.ಪಂ.ವ್ಯಾಪ್ತಿಯ ಚೂರಿಕಾಡು ರಸ್ತೆ 15 ಲಕ್ಷ ರೂ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ ಇಸ್ಮಾಯಿಲ್, ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಪಿ.ಎ ಹನೀಫ್ ಮತ್ತಿತರರು ಇದ್ದರು.
What's Your Reaction?






