ಪೌರ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಿ.ಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ‌ಭಾಗವಹಿಸಿದ ಶಾಸಕ ಎ.ಎಸ್ ಪೊನ್ನಣ್ಣ

ಪೌರ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಿ.ಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ‌ಭಾಗವಹಿಸಿದ ಶಾಸಕ ಎ.ಎಸ್ ಪೊನ್ನಣ್ಣ

ಬೆಂಗಳೂರು:ರಾಜ್ಯದಲ್ಲಿನ ಪೌರಕಾರ್ಮಿಕರ ಸಮಸ್ಯೆಗಳ ಹಾಗು ವಿವಿಧ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರ ನೇತೃತ್ವದಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ಪೌರಾಡಳಿತ ಸಚಿವರಾದ ರಹೀಂ ಖಾನ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ , ಮುಖ್ಯಮಂತ್ರಿ ಅವರ ಅಪರ ಕಾರ್ಯದರ್ಶಿ ಅಂಜುಂ ಪರ್ವೇಜ್,ಮುಖ್ಯಮಂತ್ರಿಗಳ ಕಾರ್ಯದರ್ಶಿ ಬಿ ಬಿ ಕಾವೇರಿ, ಹಾಗೂ ಸೇರಿದಂತೆ ಹಿರಿಯ ಅಧಿಕಾರಿಗಳು, ಪೌರ ಕಾರ್ಮಿಕರ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.