ಕಾಮನ್ ವೆಲ್ತ್ ಲೀಗಲ್ ಎಜುಕೇಶನ್ ವತಿಯಿಂದ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಿದ ಶಾಸಕ ಎ.ಎಸ್ ಪೊನ್ನಣ್ಣ

Apr 18, 2026 - 19:59
Apr 18, 2026 - 19:59
 0  145
ಕಾಮನ್ ವೆಲ್ತ್ ಲೀಗಲ್ ಎಜುಕೇಶನ್  ವತಿಯಿಂದ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಿದ  ಶಾಸಕ ಎ.ಎಸ್ ಪೊನ್ನಣ್ಣ

ಬೆಂಗಳೂರು; ಕಾಮನ್ವೆಲ್ತ್ ಕಾನೂನು ಶಿಕ್ಷಣ ಸಂಘ (CLEA) ವತಿಯಿಂದ ಇಂದು ಬೆಂಗಳೂರು ನಗರದ ಶಾಂಗ್ರಿಲಾ ಹೋಟೆಲ್ ನಲ್ಲಿ ಸುಸ್ಥಿರ ಶಕ್ತಿ: 2047 ರಲ್ಲಿ ಭಾರತಕ್ಕೆ ಒಂದು ಕಾರ್ಯಸೂಚಿ ಇಂಧನ ನ್ಯಾಯಕ್ಕಾಗಿ ಕಾನೂನು, ನೀತಿ ಮತ್ತು ನಾವೀನ್ಯತೆಯನ್ನು ಮರುರೂಪಿಸುವುದು ಕುರಿತು ಅಂತರರಾಷ್ಟ್ರೀಯ ಸಮ್ಮೇಳನವನ್ನು ಏರ್ಪಡಿಸಲಾಗಿತ್ತು.

ಈ ಸಮ್ಮೇಳವನ್ನು ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಗೌರವಾನ್ವಿತ ಸೂರ್ಯ ಕಾಂತ್ ರವರು ಉದ್ಘಾಟಿಸಿ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಇಂಧನ ಸಚಿವರಾದ ಕೆ.ಜೆ ಜಾರ್ಜ್, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮತ್ತು ಸಮ್ಮೇಳನ ಆಯೋಜನಾ ಸಮಿತಿಯ ಮುಖ್ಯ ಸಲಹೆಗಾರರಾದ ಗೌರವಾನ್ವಿತ ನ್ಯಾಯಮೂರ್ತಿ ವಿಭು ಬಖ್ರು, ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ, ಕರ್ನಾಟಕದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ (ಭಾ.ಆ.ಸೇ), ಭಾರತೀಯ ಕಾನೂನು ಸಂಸ್ಥೆಯ ಹಿರಿಯ ಪ್ರಾಧ್ಯಾಪಕರು ಮತ್ತು ಸಮ್ಮೇಳನದ ಅಧ್ಯಕ್ಷರಾದ ಪ್ರೊ. ಡಾ. ಎಸ್. ಶಿವಕುಮಾರ್, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಮತ್ತು ಸಮ್ಮೇಳನ ಆಯೋಜನಾ ಸಮಿತಿಯ ಅಧ್ಯಕ್ಷರಾದ ಗೌರವಾನ್ವಿತ ನ್ಯಾಯಮೂರ್ತಿ ಡಿ.ಕೆ. ಸಿಂಗ್ ರವರು ಸೇರಿದಂತೆ ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು.

 ಬಳಿಕ ಇಂದು ಸಂಜೆ 05 15 ಗಂಟೆಗೆ ಶಕ್ತಿ, ಕೃತಕ ಬುದ್ಧಿಮತ್ತೆ ಮತ್ತು ಶಕ್ತಿ ವ್ಯವಸ್ಥೆಗಳ ಡಿಜಿಟಲೀಕರಣ ಹಾಗೂ ವಿವಿಧ ವಿಷಯಗಳ ಕುರಿತು ಕರ್ನಾಟಕದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ರವರು ವಿಚಾರ ಸಂಕಿರಣದಲ್ಲಿ ವಿಷಯವನ್ನು ಮಂಡಿಸಲಿದ್ದಾರೆ.

What's Your Reaction?

Like Like 1
Dislike Dislike 1
Love Love 1
Funny Funny 0
Angry Angry 0
Sad Sad 0
Wow Wow 0