ದೇವರಕೊಲ್ಲಿ ಶ್ರೀ ಚಾಮುಂಡೇಶ್ವರಿ 5ನೇ ವರ್ಷದ ನವರಾತ್ರಿ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಎ.ಎಸ್ ಪೊನ್ನಣ್ಣ
ಮಡಿಕೇರಿ: ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಮಡಿಕೇರಿ ತಾಲ್ಲೂಕಿನ ದೇವರಕೊಲ್ಲಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಭೇಟಿ ನೀಡಿ ದೇವರ ಆಶೀರ್ವಾದ ಪಡೆದ ಬಳಿಕ ಶ್ರೀ ಚಾಮುಂಡೇಶ್ವರಿ 5ನೇ ವರ್ಷದ ನವರಾತ್ರಿ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್, ಸೂರಜ್ ಹೊಸೂರು, ಹಾಗೂ ಪ್ರಮುಖರು ಉಪಸ್ಥಿತರಿದ್ದರು.