KPSC ಸುಧಾರಣಾ ಸಭೆಯಲ್ಲಿ ಭಾಗವಹಿಸಿದ ಶಾಸಕ ಎ.ಎಸ್. ಪೊನ್ನಣ್ಣ

Jun 17, 2026 - 11:38
 0  180
KPSC ಸುಧಾರಣಾ ಸಭೆಯಲ್ಲಿ ಭಾಗವಹಿಸಿದ ಶಾಸಕ ಎ.ಎಸ್. ಪೊನ್ನಣ್ಣ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಪಾರದರ್ಶಕತೆ ತಂದು ಅಕ್ರಮಗಳನ್ನು ತಡೆಗಟ್ಟಲು ರಚಿಸಲಾದ ಸಮಿತಿಯ 5ನೇ ಸಭೆ ಬುಧವಾರ ವಿಧಾನಸೌಧದಲ್ಲಿ ಜರುಗಿತು.

ಶಾಸಕ ಆರ್.ವಿ. ದೇಶಪಾಂಡೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಯೋಗದ ಕಾರ್ಯವಿಧಾನದಲ್ಲಿ ಮತ್ತಷ್ಟು ಸುಧಾರಣೆ ತರಲು ಸೂಕ್ತ ಶಿಫಾರಸುಗಳೊಂದಿಗೆ ವರದಿ ಸಿದ್ಧಪಡಿಸುವ ಕುರಿತು ಚರ್ಚಿಸಲಾಯಿತು.

 ಕರ್ನಾಟಕ ವಿಧಾನಸಭೆಯ ಸದನ ಸಮಿತಿ ಸದಸ್ಯ ಹಾಗೂ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಸಭೆಯಲ್ಲಿ ಭಾಗವಹಿಸಿ ಆಯೋಗದ ಸುಧಾರಣೆಗೆ ಸಂಬಂಧಿಸಿದಂತೆ ಹಲವು ಅಮೂಲ್ಯ ಸಲಹೆಗಳನ್ನು ನೀಡಿದರು.ಪರೀಕ್ಷಾ ಪ್ರಕ್ರಿಯೆ, ಮೌಲ್ಯಮಾಪನ, ನೇಮಕಾತಿ ಪಾರದರ್ಶಕತೆ ಹೆಚ್ಚಿಸುವ ಕುರಿತು ಅವರು ಅಭಿಪ್ರಾಯ ಮಂಡಿಸಿದರು.

ಸಭೆಯಲ್ಲಿ ಮಾಜಿ ಸಚಿವ ಎಸ್. ಸುರೇಶ್ ಕುಮಾರ್, ಶಾಸಕರಾದ ಹಂಪನಗೌಡ ಬಾದರ್ಲಿ, ಅರಗ ಜ್ಞಾನೇಂದ್ರ, ರಾಘವೇಂದ್ರ ಬಸವರಾಜು ಹಿಟ್ನಾಳ್, ರೂಪಕಲಾ ಎಂ. ಹಾಗೂ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿಗಳು ಸೇರಿದಂತೆ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0