ಮೈಸೂರು ಕಾಫಿ ಸಂಸ್ಕರಣಾ ಸಹಕಾರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸಿದ ಶಾಸಕ ‌ಎ.ಎಸ್ ಪೊನ್ನಣ್ಣ

ಮೈಸೂರು ಕಾಫಿ ಸಂಸ್ಕರಣಾ ಸಹಕಾರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸಿದ ಶಾಸಕ ‌ಎ.ಎಸ್ ಪೊನ್ನಣ್ಣ

ಮೈಸೂರು:ದಿ-ಮೈಸೂರು ಕಾಫಿ ಸಂಸ್ಕರಣಾ ಸಹಕಾರ ಸಂಘ ಇದರ 2024-2025ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು. ಪೊನ್ನಣ್ಣ ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಈ ಸಾಲಿನ ಎಲ್ಲಾ ವರದಿಯನ್ನು ಪರಿಶೀಲಿಸಿ ಮುಂದಿನ ಸಾಲಿಗೆ ಬೇಕಾದಂತಹ ಅಗತ್ಯ ಸಲಹೆ ಸೂಚನೆಗಳನ್ನು ಚರ್ಚಿಸಿ ನಿರ್ಣಯ ಕೈಗೊಂಡರು. ಈ ಸಂದರ್ಭದಲ್ಲಿ ಕಾಫಿ ಸಂಸ್ಕರಣಾ ಸಹಕಾರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು,ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು