ದೀಪಿಕಾ” ಉನ್ನತ ಶಿಕ್ಷಣ ವಿದ್ಯಾರ್ಥಿವೇತನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಎ.ಎಸ್ ಪೊನ್ನಣ್ಣ

ಬೆಂಗಳೂರು:ಡಾ.ಬಾಬು ರಾಜೇಂದ್ರ ಪ್ರಸಾದ್ ಅಂತರಾಷ್ಟ್ರೀಯ ಸಮಾವೇಶ ಭವನ ಹಾಗೂ ಜಿಕೆವಿಕೆ ಹೆಬ್ಬಾಳ ದಲ್ಲಿ, ಉನ್ನತ ಶಿಕ್ಷಣ ಇಲಾಖೆ ಮತ್ತು ಅಜೀಂ ಪ್ರೇಮ್‌ಜಿ ಫೌಂಡೇಶನ್ ಸಹಯೋಗದೊಂದಿಗೆ ಏರ್ಪಡಿಸಿದ್ದ, ರಾಜ್ಯದ ವಿದ್ಯಾರ್ಥಿನಿಯರಿಗಾಗಿ “ದೀಪಿಕಾ” ಉನ್ನತ ಶಿಕ್ಷಣ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ವಿದ್ಯುಕ್ತವಾಗಿ ಲೋಕಾರ್ಪಣೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಮಾನ್ಯ ಸಚಿವರುಗಳಾದ ಡಾ. ಶರಣ್ ಪ್ರಕಾಶ್ ಪಾಟೀಲ್, ಡಾ. ಎಂ.ಸಿ ಸುಧಾಕರ್, ಎಚ್.ಕೆ ಪಾಟೀಲ್, ವಿರಾಜಪೇಟೆ ಶಾಸಕರು ಹಾಗೂ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಸನ್ಮಾನ್ಯ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.