ಮೈಸೂರು ಕೊಡವ ಸಮಾಜದಲ್ಲಿ “ಕೊಡವಾಮೆರ ಆರ ಬೇರ” ಕಾರ್ಯಕ್ರಮದಲ್ಲಿ ಭಾಗವಹಿಸಿ ಶಾಸಕ ಎ.ಎಸ್ ಪೊನ್ನಣ್ಣ

ಮೈಸೂರು ಕೊಡವ ಸಮಾಜದಲ್ಲಿ  “ಕೊಡವಾಮೆರ ಆರ ಬೇರ” ಕಾರ್ಯಕ್ರಮದಲ್ಲಿ ಭಾಗವಹಿಸಿ ಶಾಸಕ ಎ.ಎಸ್ ಪೊನ್ನಣ್ಣ

ಮಡಿಕೇರಿ:ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಕೊಡವ ಸಮಾಜ ಮೈಸೂರು ಸಹಯೋಗದಲ್ಲಿ ಮೈಸೂರು ಕೊಡವ ಸಮಾಜದಲ್ಲಿ “ಕೊಡವಾಮೆರ ಆರ ಬೇರ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಚಾಲನೆ ನೀಡಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ, ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಮೈಸೂರು ಕೊಡವ ಸಮಾಜದ ಅಧ್ಯಕ್ಷರಾದ ಪೊಂಜಂಡ ಎ.ಗಣಪತಿ, ಮೈಸೂರು ಮಹಾ ನಗರಪಾಲಿಕೆ ಮಾಜಿ ಸದಸ್ಯರಾದ ಮಾಳೇಟಿರ ಸುಬ್ಬಯ್ಯ, ಅಕಾಡೆಮಿ ಸದಸ್ಯರು ಉಪಸ್ಥಿತರಿದ್ದರು.