ಮುಖ್ಯಮಂತ್ರಿಗಳಿಗೆ ಮೈಸೂರು ಕಾಫಿ ಸಂಸ್ಕರಣ ಸಂಘದ ಪರವಾಗಿ ಮನವಿ ಸಲ್ಲಿಸಿದ ಶಾಸಕ ಎ.ಎಸ್ ಪೊನ್ನಣ್ಣ

ಮುಖ್ಯಮಂತ್ರಿಗಳಿಗೆ ಮೈಸೂರು ಕಾಫಿ ಸಂಸ್ಕರಣ ಸಂಘದ ಪರವಾಗಿ ಮನವಿ ಸಲ್ಲಿಸಿದ ಶಾಸಕ   ಎ.ಎಸ್ ಪೊನ್ನಣ್ಣ

ಮಡಿಕೇರಿ:ದಿ ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘಕ್ಕೆ, 3 ಎಕರೆ 34 ಗುಂಟೆ ಜಮೀನು ಹಾಗೂ ₹ 3 ಕೋಟಿ ಅನುದಾನ ಕೋರಿ, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಸಂಘದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಪ್ರಭು ಕುಮಾರ್ ಹಾಗೂ ನಿರ್ದೇಶಕರುಗಳು ಉಪಸ್ಥಿತರಿದ್ದರು.