ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿಯ ಪ್ರಗತಿ ಪರಿಶೀಲನಾ ಸಭೆ: ಶಾಸಕ ಎ.ಎಸ್. ಪೊನ್ನಣ್ಣ ಭಾಗಿ

ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿಯ ಪ್ರಗತಿ ಪರಿಶೀಲನಾ ಸಭೆ:  ಶಾಸಕ ಎ.ಎಸ್. ಪೊನ್ನಣ್ಣ ಭಾಗಿ

ಬೆಂಗಳೂರು:ಕರ್ನಾಟಕ ರಾಜ್ಯ ಸರಕಾರ ಹಮ್ಮಿಕೊಂಡಿರುವ, ಬಹು ನಿರೀಕ್ಷಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಕುರಿತು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರ ಗೃಹ ಕಚೇರಿ ಕೃಷ್ಣಾದಲ್ಲಿ, ಇಂದು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಲಾಯಿತು.

 ಈ ಸಭೆಯಲ್ಲಿ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್, ಸಚಿವರುಗಳಾದ ಎನ್.ಎಸ್ ಭೋಸರಾಜು, ಎಚ್.ಕೆ ಪಾಟೀಲ್, ಬೈರತಿ ಸುರೇಶ್, ಕೃಷ್ಣ ಬೈರೇಗೌಡ, ಮಧು ಬಂಗಾರಪ್ಪ, ಶಿವರಾಜ್ ಎಸ್. ತಂಗಡಗಿ, ರಹೀಮ್ ಖಾನ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ‌ರಜನೀಶ್, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯ್ಕ್‌, ಮುಖ್ಯಮಂತ್ರಿಗಳು ಆರ್ಥಿಕ ಸಲಹೆಗಾರ ಬಸವರಾಜು ರಾಯ ರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಾಸಿರ್ ಅಹ್ಮದ್, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಅಂಜುಂ ಪರ್ವೇಜ್‌, ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಮಾನ್ಯ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಂದ ಜಿಲ್ಲಾವಾರು ವರದಿಗಳನ್ನು ಪಡೆದು ಪರಿಶೀಲಿಸಿ ಹಲವು ಸೂಚನೆಗಳನ್ನು ನೀಡಿದರು.