Kodagu

ಕೊಡಗು ವಿದ್ಯಾಸಂಘದ ಕಟ್ಟಡ ಕಾಮಗಾರಿ ವೀಕ್ಷಿಸಿದ ಶಾಸಕ ಎ.ಎಸ್ ಪೊನ್ನಣ್ಣ

admincoorgdaily

ಮಡಿಕೇರಿ:ಕಾರ್ಯಕ್ರಮ ನಿಮಿತ್ತ ಮಡಿಕೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು, ಕೊಡಗು ಗೌಡ ವಿದ್ಯಾಸಂಘದ ಅಧ್ಯಕ್ಷರಾದ ಅಂಬೇಕಲ್ ನವೀನ್ ರವರ ಕೋರಿಕೆ ಮೇರೆಗೆ ನಿರ್ಮಾಣ ಹಂತದಲ್ಲಿರುವ ಕೊಡಗು ಗೌಡ ವಿದ್ಯಾಸಂಘದ ಕಟ್ಟಡ ಕಾಮಗಾರಿಯ ವೀಕ್ಷಿಸಿದರು.

 ಈ ಸಂದರ್ಭದಲ್ಲಿ ಡಿಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೊಡಗು ಗೌಡ ಸಮಾಜದ ನಿರ್ದೇಶಕರಾದ ಕೊಲ್ಯದ ಗಿರೀಶ್, ಕಾರ್ಯದರ್ಶಿಯವರಾದ ಪೇರಿಯಾನ ಉದಯ್, ಕೊಡಗು ಗೌಡ ಸಮಾಜದ ಉಪಾಧ್ಯಕ್ಷರಾದ ಸೂರ್ತಲೆ ಸೋಮಣ್ಣ ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು.