ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸ್ವಾಗತ ಕೋರಿದ ಶಾಸಕ ಎ.ಎಸ್ ಪೊನ್ನಣ್ಣ

ವಿರಾಜಪೇಟೆ: ಸೆಪ್ಟೆಂಬರ್ 23ರಂದು ಕೊಡಗು ಜಿಲ್ಲೆಯ ವಿವಿಧೆಡೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ರವರು ಸೋಮವಾರ ರಾತ್ರಿ ವಿರಾಜಪೇಟೆಗೆ ಆಗಮಿಸಿದರು. ಸಚಿವರನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ತನ್ನ ಕ್ಷೇತ್ರಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು.