SSLC ಯಲ್ಲಿ ಗರಿಷ್ಠ ಅಂಕ ಗಳಿಸಿದ ಮೋಕ್ಷಿತಾಗೆ ಮುಂದಿನ ಐದು ವರ್ಷಗಳ ಕಾಲ ವಿದ್ಯಾರ್ಥಿವೇತನ ಘೋಷಿಸಿದ ಶಾಸಕ ಎಎಸ್ ಪೊನ್ನಣ್ಣ

Dec 29, 2025 - 13:57
 0  932
SSLC ಯಲ್ಲಿ ಗರಿಷ್ಠ ಅಂಕ ಗಳಿಸಿದ ಮೋಕ್ಷಿತಾಗೆ ಮುಂದಿನ ಐದು ವರ್ಷಗಳ ಕಾಲ ವಿದ್ಯಾರ್ಥಿವೇತನ ಘೋಷಿಸಿದ ಶಾಸಕ ಎಎಸ್ ಪೊನ್ನಣ್ಣ

ವಿರಾಜಪೇಟೆ:ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲ್ಲೂಕಿನ ತಿತಿಮತಿಯಲ್ಲಿ, ಲ್ಯಾಂಪ್ಸ್ ಅಕಾಡೆಮಿಯ ಬೆಳ್ಳಿಹಬ್ಬ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.

ಇದೇ ಸಂದರ್ಭದಲ್ಲಿ SSLC ಯಲ್ಲಿ ಗರಿಷ್ಠ ಅಂಕ ಗಳಿಸಿದ ಮೋಕ್ಷಿತಾಗೆ ಮುಂದಿನ ಐದು ವರ್ಷಗಳ ಕಾಲ ವಿದ್ಯಾರ್ಥಿವೇತನ ಘೋಷಿಸಿದ ಶಾಸಕ ಪೊನ್ನಣ್ಣ ಅವರು ಘೋಷಿಸಿದರು. ಈ ಶಾಲೆಯಲ್ಲಿ ಕಳೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 613 ಅಂಕ ಗಳಿಸಿದ ಬಡ ವಿದ್ಯಾರ್ಥಿನಿ ಮೋಕ್ಷಿತ ಗೆ ಮಾನ್ಯ ಶಾಸಕರು ಅವರ ದತ್ತಿನಿದಿಯಿಂದ ಮುಂದಿನ ಐದು ವರ್ಷಗಳ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿ ವೇತನವನ್ನು ಘೋಷಿಸಿದರು.

 ಲೈನ್ ಮನೆಯಲ್ಲಿ ವಾಸವಿದ್ದುಕೊಂಡು ಬಡ ಕುಟುಂಬದಿಂದ ಬಂದಿರುವ ಮೋಕ್ಷಿತ ಸ್ವ ಪ್ರಯತ್ನದಿಂದ ಈ ಅಂಕ ಗಳಿಸಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಮಾನ್ಯ ಶಾಸಕರು ಅವರ ಭವಿಷ್ಯ ಉಜ್ವಲವಾಗಿರಲಿ ಹಾಗೂ ಮುಂದಿನ ದಿನಗಳಲ್ಲಿ ಈ ಬಾಲೆಯ ವಿದ್ಯಾಭ್ಯಾಸಕ್ಕಾಗಿ, ತನ್ನ ಕೈಲಾಗುವ ಎಲ್ಲಾ ಸಹಾಯ ಮಾಡುವುದಾಗಿ ಇದೇ ಸಂದರ್ಭದಲ್ಲಿ ಘೋಷಿಸಿದರು. ಶಾಲೆಯ ಪ್ರಮುಖರನ್ನು ಹಾಗೂ ಸ್ಥಾಪಕರನ್ನು ಮಾನ್ಯ ಶಾಸಕರು ಸನ್ಮಾನಿಸಿ ಗೌರವಿಸಿದರು.

 ಬೆಳ್ಳಿ ಹಬ್ಬದ ಶುಭಾಶಯಗಳು ಹಾರೈಸುತ್ತಾ ಮಾತನಾಡಿದ ಮಾನ್ಯ ಶಾಸಕರು, ಲ್ಯಾಂಪ್ ಅಕಾಡೆಮಿಯು ದಶಕಗಳಿಂದ ಉತ್ತಮ ಸೇವೆ ಸಲ್ಲಿಸುತ್ತಾ ಈ ಭಾಗದ ಮಕ್ಕಳ ವಿದ್ಯಾರ್ಜನೆಗೆ ಶ್ರಮವಹಿಸುತ್ತಿದೆ. ಇಲ್ಲಿ ಕಲಿತ ಮಕ್ಕಳು ಸಮಾಜದಲ್ಲಿ ಉತ್ತಮ ಹೆಸರು ಗಳಿಸುತ್ತಿದ್ದಾರೆ ಮುಂದೆಯೂ ಸಹ ನಾಡಿಗೆ ಉತ್ತಮ ವ್ಯಕ್ತಿಗಳನ್ನು ಈ ಅಕಾಡೆಮಿಯ ಮೂಲಕ ಕೊಡುವಂತಾಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಚೆಪ್ಪುಡೀರ ಅರುಣ್ ಮಾಚಯ್ಯ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರೀರ ನವೀನ್, ವಲಯ ಅಧ್ಯಕ್ಷರಾದ ನವೀನ್, ಆಡಳಿತ ಮಂಡಳಿಯವರು, ಶಾಲೆಯ ಮುಖ್ಯೋಪಾಧ್ಯಾಯರು, ಸಿಬ್ಬಂದಿ ವರ್ಗದವರು, ಶಾಲಾ ಮಕ್ಕಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 1
Sad Sad 0
Wow Wow 0