ಕಾವೇರಿ ಪೊಮ್ಮಕ್ಕಡ ಕೂಟದ ವತಿಯಿಂದ ಆಯೋಜಿಸಿದ ಮೀನ್ಯಾರ್ ನಮ್ಮೆ ಕಾರ್ಯಕ್ರಮದಲ್ಲಿ ಶಾಸಕ ಎಎಸ್ ಪೊನ್ನಣ್ಣ

Apr 3, 2026 - 16:27
 0  455
ಕಾವೇರಿ ಪೊಮ್ಮಕ್ಕಡ ಕೂಟದ ವತಿಯಿಂದ ಆಯೋಜಿಸಿದ ಮೀನ್ಯಾರ್ ನಮ್ಮೆ ಕಾರ್ಯಕ್ರಮದಲ್ಲಿ ಶಾಸಕ ಎಎಸ್ ಪೊನ್ನಣ್ಣ

ಗೋಣಿಕೊಪ್ಪ: ಕಾವೇರಿ ಪೊಮ್ಮಕ್ಕಡ ಕೂಟದ ವತಿಯಿಂದ ಆಯೋಜಿಸಿರುವ ಮೀನ್ಯಾರ್ ನಮ್ಮೆ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.

ಪೊಮ್ಮಕ್ಕಡ ಕೂಟ ಮೇಳವನ್ನು ಉದ್ಘಾಟಿಸಿದ ಕಾಂಚನ್ ಪೊನ್ನಣ್ಣ : ಸಭಾ ಕಾರ್ಯಕ್ರಮಕ್ಕೂ ಮೊದಲು ಕಾವೇರಿ ಪೊಮ್ಮಕ್ಕಡ ಕೂಟ ರವರ ಆಯೋಜಿಸಿದ ಮಹಿಳೆಯರ ಮೇಳ ಕಾರ್ಯಕ್ರಮವನ್ನು ವಿರಾಜಪೇಟೆ ಶಾಸಕರ ಧರ್ಮಪತ್ನಿ ಶ್ರೀಮತಿ ಕಾಂಚನ್ ಪೊನ್ನಣ್ಣ ರವರು ಉದ್ಘಾಟಿಸಿ ಶುಭ ಕೋರಿದರು.

ಬಳಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾನ್ಯ ಶಾಸಕರಾದ ಶ್ರೀ ಎ.ಎಸ್ ಪೊನ್ನಣ್ಣ ರವರು ಶುಭಕೋರಿದರು. ಬಳಿಕ ಮಾತನಾಡಿದ ಶಾಸಕರು, ಕಾವೇರಿ ಪೊಮ್ಮಕ್ಕಡ ಕೂಟವು ಸತತ ಹಲವಾರು ವರ್ಷಗಳಿಂದ ಅನೇಕ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಇದು ಮಹಿಳಾ ಸಬಲೀಕರಣಕ್ಕೆ ಒಂದು ಉತ್ತಮ ನಿದರ್ಶನವಾಗಿದೆ. ಸಮಾಜ ಏಳಿಗೆ ಕಾಣಬೇಕೆಂದರೆ ಮಹಿಳೆಯರು ಇದರಲ್ಲಿ ಭಾಗಿಯಾಗಬೇಕು.

 ಉತ್ತಮ ಹಾಗೂ ಸದೃಢ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಬಹುದೊಡ್ಡದಾಗಿದೆ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ ನಾಡಿಗೆ ಶ್ರೇಯಸ್ಸು ತನ್ನಿ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಗೋಣಿಕೊಪ್ಪ ಕಾವೇರಿ ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಶ್ರೀಮತಿ ಕೊಟ್ಟಂಗಡ ವಿಜು ದೇವಯ್ಯ, ಸನ್ಮಾನಿತರು ಬಿದ್ದಂಡ ನಾಣಿ ನಾಣಯ್ಯ, ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ,ಮಾಳೆಟೀರ ಅಜಿತ್ ಪೂವಣ್ಣ, ಚೀಫ್ ಎಲೆಟ್ರಿಕಲ್ ಆಫೀಸರ್ ತಿತೀರ ರೋಷನ್ ಅಪ್ಪಚ್ಚು, ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷರು ಕಾಳಿಮಾಡ ಮೋಟಯ್ಯ, ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷರು ಚಿರಿಯಪಂಡ ಸುರೇಶ್ ನಂಜಪ್ಪ, ಟಾಟು ಮೊಣ್ಣಪ್ಪ, ನೇರವಂಡ ಉಮೇಶ್, ಕೊಕ್ಕಂಡ ರೂಪಾ ಭೀಮಯ್ಯ, ಕೊಳೇರ ಭಾರತಿ, ಸುನಿತಾ, ಅನಿತಾ, ಕಾಡೇಮಾಡ ಕುಸುಮಾ, ಕಾಳಮಾಂಡ ಜಗತ್, ನಯನ, ದಿಲ್ಲು, ಕುಂಡಚ್ಚಿರ ಮಂಜು ದೇವಯ್ಯ, ಗೋಣಿಕೊಪ್ಪ ಕಾವೇರಿ ಪೊಮ್ಮಕ್ಕಡ ಕೂಟದ ನಿರ್ದೇಶಕರು, ಸರ್ವ ಸದಸ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0