ನೋಂದಾಯಿತ ಕಾರ್ಮಿಕರಿಗೆ, ಕಾರ್ಮಿಕ ಮಂಡಳಿಯ ಕಿಟ್ ವಿತರಿಸಿದ ಶಾಸಕ ಎಎಸ್ ಪೊನ್ನಣ್ಣ

ನೋಂದಾಯಿತ ಕಾರ್ಮಿಕರಿಗೆ, ಕಾರ್ಮಿಕ ಮಂಡಳಿಯ ಕಿಟ್ ವಿತರಿಸಿದ ಶಾಸಕ ಎಎಸ್ ಪೊನ್ನಣ್ಣ

ವಿರಾಜಪೇಟೆ:ಕಾರ್ಮಿಕ ಇಲಾಖೆಯ ವತಿಯಿಂದ, ರಾಜ್ಯ ಸರ್ಕಾರದ ನೋಂದಾಯಿತ ಕಾರ್ಮಿಕರಿಗೆ ನೀಡಲಾಗುವ ಕಟ್ಟಡ ಮತ್ತು ಇತರೆ ಕಾರ್ಮಿಕ ಮಂಡಳಿಯ ನೀಡಲಾಗುವ ಕಿಟ್ ಗಳನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣನವರು ವಿತರಿಸಿದರು.

ಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ ಕರ್ನಾಟಕ ಕಟ್ಟಡ ಇತರೆ ನಿರ್ಮಾಣ ಕಾಮಗಾರಿ ಕಲ್ಯಾಣ ಮಂಡಳಿ ರಾಜ್ಯ ಸರ್ಕಾರ ಹೊರಡಿಸಿರುವ ನೂತನ ಸಂಚಾರಿ ಆರೋಗ್ಯ ಘಟಕವನ್ನು ಸಹ ಉದ್ಘಾಟನೆ ಮಾಡಿದರು.

 ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ಪುರಸಭೆ ಮಾಜಿ ಸದಸ್ಯರು ರಾಜೇಶ್ ಪದ್ಮನಾಭ, ರಾಫಿ, ಮತೀನ್ ,ಪಕ್ಷದ ಮುಖಂಡರು ಮಹಾದೇವ, ಸತೀಶ್, ಕುಂಡಚ್ಚಿರ ಮಂಜು ದೇವಯ್ಯ, ಶಬೀರ್, ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.