ಮುಖ್ಯಮಂತ್ರಿಗಳ ಅಮೃತ್ ನಗರೋತ್ಥಾನಯೋಜನೆಯಡಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿ ನಿಲಯಕ್ಕೆ ಸಾಮಾಗ್ರಿಗಳನ್ನು ವಿತರಿಸಿದ ಶಾಸಕ ಎಎಸ್ ಪೊನ್ನಣ್ಣ
ವಿರಾಜಪೇಟೆ: ಪುರಸಭೆ ವತಿಯಿಂದ ಮುಖ್ಯಮಂತ್ರಿಗಳ ಅಮೃತ್ ನಗರೋತ್ಥಾನಯೋಜನೆಯ ಹಂತ -04 ರಡಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿ ನಿಲಯಕ್ಕೆ ಸಾಮಾಗ್ರಿಗಳ ವಿತರಣೆ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಉಪಾಧ್ಯಕ್ಷೆ ಫಸಿಯಾ ತಬ್ಸುಂ, ಪುರಸಭೆ ಸದಸ್ಯರು ರಾಫಿ, ಮತೀನ್,ಬೆನ್ನಿ ಆಗಷ್ಟಿನ್, ರಾಜೇಶ್, ಹಮೀದ್, ಪುರಸಭೆ ಮುಖ್ಯಧಿಕಾರಿ ನಾಚಪ್ಪ, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.