ಟೈಲರಿಂಗ್ ಯಂತ್ರ ವಿತರಿಸಿದ ಶಾಸಕ ಎಎಸ್ ಪೊನ್ನಣ್ಣ
ವಿರಾಜಪೇಟೆ:, ತಾಲೂಕಿನ ಕಣ್ಣಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಟೈಲರಿಂಗ್ ವೃತ್ತಿಯನ್ನು ನಿರ್ವಹಿಸುತ್ತಿರುವ ಸುನಂದ ಎ. ಪಿ.ಇವರಿಗೆ, ಗ್ರಾಮೀಣ ಕೈಗಾರಿಕಾ ಇಲಾಖೆಯಿಂದ ಟೈಲರಿಂಗ್ ಯಂತ್ರೋಪಕರಣಗಳನ್ನು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ವಿತರಿಸಿದರು.
ಇದೇ ಸಂದರ್ಭದಲ್ಲಿ ಸುನಂದ ಎ.ಪಿ ರವರು ಶಾಸಕರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರಿಗೆ, ಕಣ್ಣಂಗಾಲ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಮಚ್ಚಾರಂಡ ಕಿರಣ್, ಗ್ರಾಮೀಣ ಕೈಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಶ್ರೀ ರಘು ಇವರುಗಳಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಈ ಸಂದರ್ಭದಲ್ಲಿ ವಿರಾಜಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷರಾದ ಮಾಳೆಟೀರ ಬೋಪಣ್ಣ, ಜಿಲ್ಲಾ ಅಲ್ಪಸಂಖ್ಯಾತರ ಘಟದ ಅಧ್ಯಕ್ಷರಾದ ಹನೀಫ್, ಪಕ್ಷದ ಪ್ರಮುಖರಾದ ಪಟ್ಟಡ ದೀಪಕ್, ಸಂತೋಷ್, ಹಾಗೂ ಪ್ರಮುಖರು ಉಪಸ್ಥಿತರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
