ಮೀನುಗಾರಿಕೆ ಇಲಾಖೆಯಿಂದ ವಿವಿಧ ಅರ್ಹ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದ ಶಾಸಕ ಎಎಸ್ ಪೊನ್ನಣ್ಣ
ವಿರಾಜಪೇಟೆ; ಮೀನುಗಾರಿಕೆ ಇಲಾಖೆಯಿಂದ ವಿವಿಧ ಅರ್ಹ ಫಲಾನುಭವಿಗಳಿಗೆ ವಿವಿಧ ಸೌಲತ್ತುಗಳ ವಿತರಣೆಯನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಇಂದು ನೆರವೇರಿಸಿದರು.
ಮತ್ಸ್ಯಾಶ್ರಯ ಯೋಜನೆ ಅಡಿಯಲ್ಲಿ ಮನೆ ನಿರ್ಮಾಣ, ಮೀನು ಹಿಡಿಯಲು ಬೇಕಾಗುವಂತಹ ಎಲ್ಲಾ ಸೌಲಭ್ಯಗಳ ವಿತರಣೆ ಹಾಗೂ ಮೀನು ಸಾಕಾಣಿಕೆಗಾಗಿ ಮೀನಿನ ಮರಿಗಳನ್ನು ವಿತರಿಸಲಾಯಿತು. ಬಳಿಕ ಫಲಾನುಭವಿಗಳನ್ನು ಉದ್ದೇಶಿಸಿ ಮಾತನಾಡಿದ ಶಾಸಕರು, ಸರಕಾರ ಬಡಜನರ ಏಳಿಗೆಗೆ ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಂಡಿದ್ದ, ಮೀನು ಸಾಕಣೆ ಮೂಲಕ ನಮ್ಮ ಜೀವನೋಪಾಯವನ್ನು ಕಂಡುಕೊಂಡವರಿಗೆ ಗೃಹ ನಿರ್ಮಾಣಕ್ಕೆ ಸಹಾಯಧನ ಹಾಗೂ ಮೀನುಗಾರಿಕೆಗೆ ಬೇಕಾದಂತಹ ಎಲ್ಲಾ ಸವಲತ್ತುಗಳನ್ನು ನೀಡುತ್ತಿದ್ದು ಇದರ ಸದುಪಯೋಗವನ್ನು ಫಲಾನುಭವಿಗಳಿಗೆ ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಮತ್ಸ್ಯಾಶ್ರಯ ಯೋಜನೆಯಡಿ ಮನೆ ಸವಲತ್ತು ಪಡೆದ ಫಲಾನುಭವಿಗಳಿಗೆ ಆದೇಶ ಪತ್ರವನ್ನು ವಿತರಿಸಿದರು. ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ಪಕ್ಷದ ಮುಖಂಡರು, ಕಾರ್ಯಕರ್ತರು, ಅರ್ಹ ಫಲಾನುಭವಿಗಳು, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.