ಪಲ್ಸ್ ಪೊಲಿಯೊ ಕಾರ್ಯಕ್ರಮಕ್ಕೆ ಶಾಸಕ ಎಎಸ್ ಪೊನ್ನಣ್ಣ ಚಾಲನೆ
ವಿರಾಜಪೇಟೆ:ಸರಕಾರ ಹಮ್ಮಿಕೊಂಡಿರುವ ಮಹತ್ವಾಕಾಂಕ್ಷೆಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.
ಎರಡು ಹನಿಗಳು ಪೋಲಿಯೋ ವಿರುದ್ಧ ನಿರಂತರ ಗೆಲುವು ಕಾರ್ಯಕ್ರಮದ ಭಾಗವಾಗಿ ವಿರಾಜಪೇಟೆ ಹಾಗೂ ಗೋಣಿಕೊಪ್ಪದಲ್ಲಿ ಆಯೋಜನೆಗೊಂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕರು, ಐದು ವರ್ಷ ಒಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕೋ ಕಾರ್ಯಕ್ರಮವನ್ನು ಸರ್ಕಾರ ಹಮ್ಮಿಕೊಂಡಿದೆ. ಡಿಸೆಂಬರ್ 21ರಿಂದ 24ರ ವರೆಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಮಕ್ಕಳ ಸ್ವಾಸ್ತ್ಯದ ದೃಷ್ಟಿಯಿಂದ ಎಲ್ಲರೂ 5 ವರ್ಷ ಒಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಬೇಕೆಂದು ಮಾನ್ಯ ಶಾಸಕರು ಕರೆ ನೀಡಿದರು.
ಈ ಸಂದರ್ಭದಲ್ಲಿ ಪಂಚಾಯಿತಿ ಅಧ್ಯಕ್ಷರು ಕುಲಚಂಡ ಪ್ರಮೋದ್ ಗಣಪತಿ, ಪಕ್ಷದ ಮುಖಂಡರು, ಕಾರ್ಯಕರ್ತರು, ಹಾಗೂ ಅರೋಗ್ಯ ಅಧಿಕಾರಿಗಳು, ಮತ್ತು ಪ್ರಮುಖರು ಉಪಸ್ಥಿತರಿದ್ದರು.