Kodagu

ಆನೆಚೌಕೂರು ಗೇಟ್ ಬಳಿ ಶಾಸಕ ಎಎಸ್ ಪೊನ್ನಣ್ಣ ಅವರಿಗೆ ಅದ್ಧೂರಿ ಸ್ವಾಗತ

admincoorgdaily

ಆನೆಚೌಕೂರು ಗೇಟ್ ಬಳಿ ಶಾಸಕ ಎಎಸ್ ಪೊನ್ನಣ್ಣ ಅವರಿಗೆ ಅದ್ಧೂರಿ ಸ್ವಾಗತ

ಗೋಣಿಕೊಪ್ಪ: ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರ ರಾಜಕೀಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ, ಮೊದಲ ಬಾರಿಗೆ ಜಿಲ್ಲೆ ಹಾಗೂ ಕ್ಷೇತ್ರಕ್ಕೆ ಆಗಮಿಸುತ್ತಿರುವ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣರವರನ್ನು ಕ್ಷೇತ್ರದ ಹೆಬ್ಬಾಗಿಲು ಆನೆ ಚೌಕೂರು ಗೇಟ್ ಬಳಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಕೆಪಿಸಿಸಿ ಸದಸ್ಯರು, ಡಿಸಿಸಿ ಸದಸ್ಯರು, ಶಾಸಕರ ಸಹೋದರರಾದ ಅಜ್ಜಿಕುಟ್ಟಿರ ನರೇನ್ ಕಾರ್ಯಪ್ಪ, ಪೊನ್ನಂಪೇಟೆ ಅಧ್ಯಕ್ಷರಾದ ಮಿದೇರಿರ ನವೀನ್, ವಿರಾಜಪೇಟೆ ಬ್ಲಾಕ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ಹಾಗೂ ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಹಾಗೂ ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷರು ಟಾಟು ಮೊಣ್ಣಪ್ಪ, ಮಹಿಳಾ ಘಟದ ಅಧ್ಯಕ್ಷರುಗಳು, ಸದಸ್ಯರುಗಳು, ಅಲ್ಪಸಂಖ್ಯಾತ ಘಟದ ಅಧ್ಯಕ್ಷರುಗಳು, ಸದಸ್ಯರುಗಳು, ಓಬಿಸಿ ಘಟದ ಅಧ್ಯಕ್ಷರುಗಳು, ಸದಸ್ಯರುಗಳು, ಎಸ್ ಟಿ ಘಟದ ಅಧ್ಯಕ್ಷರುಗಳು, ಸದಸ್ಯರುಗಳು, ಎಲ್ಲಾ ಘಟದ ಅಧ್ಯಕ್ಷರುಗಳು, ಸದಸ್ಯರುಗಳು, ನಮನಿರ್ದೇಶಿತ ಅಧ್ಯಕ್ಷರುಗಳು,ಸದಸ್ಯರುಗಳು, ಪಕ್ಷದ ಮುಖಂಡರುಗಳು, ಕಾರ್ಯಕರ್ತರು ಪ್ರಮುಖರು ಉಪಸ್ಥಿತರಿದ್ದು ಮಾನ್ಯ ಶಾಸಕರನ್ನು ಜಯ ಘೋಷಗಳೊಂದಿಗೆ ಕ್ಷೇತ್ರಕ್ಕೆ ಬರಮಾಡಿಕೊಂಡರು. ನೂರಾರು ಸಂಖ್ಯೆಯಲ್ಲಿ ಜಮಾಹಿಸಿದ್ದ ಕಾರ್ಯಕರ್ತರು ಹಾಗೂ ನಾಯಕರು ಶಾಸಕರನ್ನು ಕಂಡೊಡನೆ ಆತ್ಮೀಯವಾಗಿ ಅವರನ್ನು ಅಭಿನಂದಿಸಿದರು.