ಆನೆ‌ ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಚೆಕ್ ಹಸ್ತಾಂತರಿಸಿದ ಶಾಸಕ ಎಎಸ್ ಪೊನ್ನಣ್ಣ

ಆನೆ‌ ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಚೆಕ್ ಹಸ್ತಾಂತರಿಸಿದ ಶಾಸಕ ಎಎಸ್ ಪೊನ್ನಣ್ಣ

ಪೊನ್ನಂಪೇಟೆ:ಇತ್ತೀಚೆಗೆ ಆನೆ ದಾಳಿಯಿಂದ ಮೃತಪಟ್ಟ ದುರ್ದೈವಿ ಮುಕಳಮಾಡ ರತು ಕಾಯಿಮನೆ, ಪೊನ್ನಂಪೇಟೆ ತಾಲೂಕು, ಇವರ ಕುಟುಂಬದವರಿಗೆ ಸರಕಾರದಿಂದ ನೀಡುವ ಪರಿಹಾರ ಮತ್ತದ ಉಳಿಕೆ ₹15 ಲಕ್ಷಗಳ ಚೆಕ್ ಇಂದು ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಹಸ್ತಾಂತರಿಸಿದರು. ಈ ಹಿಂದೆ ಆನೆ ದಾಳಿಯಾದ ಸಂದರ್ಭದಲ್ಲಿ ಮೃತನ ಕುಟುಂಬಕ್ಕೆ ರೂ 5 ಲಕ್ಷದ ಚೆಕ್ಕನ್ನು ಹಸ್ತಾಂತರಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಈ ಸಂದರ್ಭದಲ್ಲಿ ಮಿದೇರಿರ ನವೀನ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.