ವಿರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಬಗ್ಗೆ ಸಭೆ ನಡೆಸಿದ ಶಾಸಕ ಎಎಸ್ ಪೊನ್ನಣ್ಣ

Dec 4, 2025 - 10:32
 0  175
ವಿರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಬಗ್ಗೆ ಸಭೆ ನಡೆಸಿದ ಶಾಸಕ ಎಎಸ್ ಪೊನ್ನಣ್ಣ

ವಿರಾಜಪೇಟೆ: ಪುರಸಭೆ ವ್ಯಾಪ್ತಿಯಲ್ಲಿ ಬರುವ ರಸ್ತೆಗಳ ಅಭಿವೃದ್ಧಿ ಬಗ್ಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಈಗಾಗಲೇ ಶಾಸಕರು ಮಳೆ ಕಡಿಮೆಯಾದೊಡನೆ ರಸ್ತೆ ಅಭಿವೃದ್ಧಿ ಕಡೆಗೆ ವಿಶೇಷ ಗಮನಹರಿಸುತ್ತಿದ್ದು ವಿರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಹಾಗೂ ರಸ್ತೆ ನಿರ್ಮಾಣದ ಬಗ್ಗೆ ವಿಶೇಷ ಸಭೆಯನ್ನು  ಕರೆದಿದ್ದರು.

ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಶ್ರೀ ನಿತಿನ್ ಚಕ್ಕಿ, ತಹಸೀಲ್ದಾರ್ ಪ್ರವೀಣ್, ಪುರಸಭೆ ಮುಖ್ಯ ಅಧಿಕಾರಿ ನಾಚಪ್ಪ, ಬ್ಲಾಕ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ಪುರಸಭೆ ಮಾಜಿ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಮಾಜಿ ಸದಸ್ಯರು ರಾಜೇಶ್ ಪದ್ಮನಾಭ, ಮತೀನ್, ರಾಫಿ, ಪೊಲೀಸ್ ಇಲಾಖೆಯ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0