ವಿರಾಜಪೇಟೆ ಹಾಗೂ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಮುಖಂಡರೊಂದಿಗೆ ಸಭೆ ನಡೆಸಿದ ಶಾಸಕ ಎಎಸ್ ಪೊನ್ನಣ್ಣ; ಪಕ್ಷ ಸಂಘಟಿಸಲು ಕರೆ

ವಿರಾಜಪೇಟೆ ಹಾಗೂ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಮುಖಂಡರೊಂದಿಗೆ ಸಭೆ ನಡೆಸಿದ ಶಾಸಕ ಎಎಸ್ ಪೊನ್ನಣ್ಣ; ಪಕ್ಷ ಸಂಘಟಿಸಲು ಕರೆ

ವಿರಾಜಪೇಟೆ:ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ*ವಿರಾಜಪೇಟೆ ಗೃಹ ಕಚೇರಿಯಲ್ಲಿ, ನಾಪೋಕ್ಲು ಹಾಗೂ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಪ್ರಮುಖರ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ರವರು ವಹಿಸಿದರು.

ಸಭೆಯಲ್ಲಿ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್, ವಿರಾಜಪೇಟೆ ಅಧ್ಯಕ್ಷರಾದ ರಂಜಿ ಪೂಣಚ್ಚ ವಲಯ ಅಧ್ಯಕ್ಷರುಗಳು, ಕೆಪಿಸಿಸಿ/ಡಿಸಿಸಿ ಪದಾಧಿಕಾರಿಗಳು, ಮುಂಚೂಣಿ ಘಟಕದ ಅಧ್ಯಕ್ಷರುಗಳು ಪದಾಧಿಕಾರಿಗಳು ಹಾಗೂ ಪ್ರಮುಖರು ಭಾಗವಹಿಸಿದರು.

 ಪಕ್ಷ ಸಂಘಟನೆ ಹಾಗೂ ಮುಂಬರುವ ಚುನಾವಣೆಗಳು ಹಾಗು ಹಲವು ಕಾರ್ಯಕ್ರಮಗಳ ಬಗ್ಗೆ ಈ ಸಭೆಯಲ್ಲಿ ಗಂಭೀರವಾಗಿ ಚರ್ಚೆ ನಡೆಯಿತು. ಶಾಸಕರು ಸಂಘಟನೆಯ ಕುರಿತು ವಿಶೇಷ ಆಸಕ್ತಿ ವಹಿಸುವಂತೆ ಕರೆ ನೀಡಿದರಲ್ಲದೇ, ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಶತ ಪ್ರತಿಶತ ನಿಭಾಯಿಸಲೇಬೇಕೆಂದು ಸೂಚಿಸಿದರು.

 ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಬೇಕಲ್ ರಮಾನಾಥ್, ಡಿಸಿಸಿ ಉಪಾಧ್ಯಕ್ಷರಾದ ಅಬ್ದುಲ್ ರೆಹಮಾನ್, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ಹನೀಫ್, ವಿರಾಜಪೇಟೆ ತಾಲೂಕು ಬಗರ್ ಹುಕುಂ ಅಧ್ಯಕ್ಷರು ಸಲಾಂ, ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷರು ಜಮ್ಮಡ ಸೋಮಣ್ಣ ಮಹಿಳಾ ಕಾಂಗ್ರೆಸ್ ಪ್ರಮುಖರು ಶೈಲಾ ಕುಟ್ಟಪ್ಪ, ಮಡಿಕೇರಿ ತಾಲೂಕು ಬಗರ್ ಹುಕುಂ ಅಧ್ಯಕ್ಷರು ನೇರವಂಡ ಉಮೇಶ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.