ಬೆಟ್ಟಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಎಎಸ್ ಪೊನ್ನಣ್ಣ

Feb 14, 2026 - 20:15
 0  334
ಬೆಟ್ಟಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಎಎಸ್ ಪೊನ್ನಣ್ಣ

ಮಡಿಕೇರಿ; ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕಿನ ಬೆಟ್ಟಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ ಉದ್ಘಾಟನೆ ನೆರವೇರಿಸಲು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಆಗಮಿಸಿದರು.

ಬೆಟ್ಟಗೇರಿ ಮುಖ್ಯರಸ್ತೆಯಿಂದ ಸ್ಥಳೀಯ ನಿವಾಸಿಗಳ ಮನೆಗೆ ತೆರಳುವ ರಸ್ತೆಯನ್ನು ಕಾಂಕ್ರೀಟೀಕರಣಗೊಳಿಸಲು ಈ ಹಿಂದೆ ಶಾಸಕರು ಅನುದಾನ ಒದಗಿಸಿದ್ದರು. ಇಂದು ಈ ರಸ್ತೆಯನ್ನು ವಿದ್ಯುಕ್ತವಾಗಿ ಉದ್ಘಾಟಿಸಿದ ಬಳಿಕ ರಸ್ತೆಯ ಗುಣಮಟ್ಟದ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು.

 ಬಳಿಕ ಸ್ಥಳೀಯ ಮಸೀದಿಯ ಪ್ರಮುಖರ ಕೋರಿಕೆ ಮೇರೆಗೆ ಮಸೀದಿಗೆ ಭೇಟಿ ನೀಡಿ ಅಲ್ಲಿಯ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತಿತೀರ ಧರ್ಮಜಉತ್ತಪ್ಪ, ಡಿಸಿಸಿ ಉಪಾಧ್ಯಕ್ಷರು ಅಬ್ದುಲ್ ರೆಹಮನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್,ವಲಯ ಕಾಂಗ್ರೆಸ್ ಅಧ್ಯಕ್ಷರಾದ ಕೊಡಗನ ತೀರ್ಥ ಪ್ರಸಾದ್, ಪಂಚಾಯಿತಿ ಅಧ್ಯಕ್ಷರಾದ ಕಮಲ ಉತ್ತಯ್ಯ, ಕೇಟೋಳಿ ಮೋಹನ್ ರಾಜ್, ಜಿಲ್ಲಾ ವಕ್ತರರು ತೆನ್ನಿರ ಮೈನಾ, ಚಿಕ್ಕಣ್ಣ, ಬಶೀರ್, ಮಜೀದ್, ಬೂತ್ ಅಧ್ಯಕ್ಷರುಗಳು, ಜುಮ್ಮಾ ಮಸೀದಿಯ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು, ಬೆಟ್ಟಗಿರಿ ವಲಯದ ಸದಸ್ಯರುಗಳು ಪದಾಧಿಕಾರಿಗಳು ಪಕ್ಷದ ಮುಖಂಡರು ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0