ತೋರ ಗ್ರಾಮದಲ್ಲಿ ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಎಎಸ್ ಪೊನ್ನಣ್ಣ

May 13, 2026 - 13:16
 0  245
ತೋರ ಗ್ರಾಮದಲ್ಲಿ ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಎಎಸ್ ಪೊನ್ನಣ್ಣ

ವಿರಾಜಪೇಟೆ;ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತೋರ ಗ್ರಾಮದಲ್ಲಿ, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ ₹ 50 ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ನೂತನ ಕಾಂಕ್ರೀಟ್ ರಸ್ತೆಯ ಲೋಕಾರ್ಪಣೆ ಕಾರ್ಯಕ್ರಮವು ಇಂದು ನೆರವೇರಿತು. ಸ್ಥಳೀಯ ಪ್ರಮುಖರ ಹಾಗೂ ಸಾರ್ವಜನಿಕರ ಕೋರಿಕೆಯಂತೆ ಮಾನ್ಯ ಶಾಸಕರು ಸದ್ರಿ ರಸ್ತೆಯ ಕಾಂಕ್ರೀಟೀಕರಣಕ್ಕೆ ಅನುದಾನವನ್ನು ಒದಗಿಸಿದ್ದರು.

 ಇಂದು ತೋರ ಭಾಗದಲ್ಲಿ ವಿವಿಧ ಕಾರ್ಯಕ್ರಮ ನಿಮಿತ್ತ ಆಗಮಿಸಿದ ಮಾನ್ಯ ಶಾಸಕರು ಸುಸಜ್ಜಿತವಾಗಿದೆ ನಿರ್ಮಾಣಗೊಂಡ ರಸ್ತೆಯನ್ನು ಲೋಕಾರ್ಪಣೆಗೊಳಿಸಿ ಶುಭ ಕೋರಿದರು. ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ಜಿಲ್ಲಾ ಸಾಮಾಜಿಕ ಜಾಲತಾಣದ ಅಧ್ಯಕ್ಷರು ಸೂರಜ್ ಹೊಸೂರು, ಕೆಡಿಪಿ ಸದಸ್ಯರು ಪ್ರಶಾಂತ್, ಜಿಲ್ಲಾ ಅಲ್ಪಸಂಖ್ಯಾತರ ಅಧ್ಯಕ್ಷರು ಹನೀಫ್, ತಾಲೂಕು ಅಲ್ಪಸಂಖ್ಯಾತರ ಅಧ್ಯಕ್ಷರು ರಫೀಕ್, ಪ್ರಮುಖರು ಜೇಫ್ರೀ, ಮಂಜುನಾಥ್, ವಿಜಯ, ಕುಶಾಲಪ್ಪ, ಶುಭ ಸುಬ್ಬಯ್ಯ, ಉಮೇಶ್, ಅರುಣಾ, ಮುದ್ದಪ್ಪ, ರಾಜೇಶ್, ಮೊಣ್ಣಪ್ಪ, ಗೋಪಮ್ಮ, ರೋಹಿಣಿ, ಲಲಿತಾ, ಕಾವೇರಮ್ಮ, ಶಾರದಾ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0