ಮಡಿಕೇರಿ ತಾಲ್ಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಶಾಸಕ ಎಎಸ್ ಪೊನ್ನಣ್ಣ

ಮಡಿಕೇರಿ ತಾಲ್ಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಶಾಸಕ ಎಎಸ್ ಪೊನ್ನಣ್ಣ

ನಾಪೋಕ್ಲು:ಕ್ಷೇತ್ರ ಶಿಕ್ಷಣಧಿಕಾರಿಗಳ ಕಚೇರಿ ಹಾಗೂ ಡಾ ಬಿ ಆರ್ ಅಂಬೇಡ್ಕರ್ ವಸತಿ ಶಾಲೆ ನಾಪೋಕ್ಲು ಇವರ ಆಶ್ರಯದಲ್ಲಿ ಮಡಿಕೇರಿ ತಾಲೂಕು ಮಟ್ಟದ 14 ಮತ್ತು 17 ವಯೋಮಿತಿ ಒಳಗಿನ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟದ ಉದ್ಘಾಟಕರಾಗಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.

ನಾಪೋಕ್ಲುವಿನ ಚೆರಿಯಪರಂಬುವಿನಲ್ಲಿರುವ ಕೆಪಿಎಸ್ ಪ್ರೌಢಶಾಲಾ ಮೈದಾನದಲ್ಲಿ ಈ ಕಾರ್ಯಕ್ರಮವು, ಶಿಕ್ಷಣ ಇಲಾಖೆಯ ವತಿಯಿಂದ ಆಯೋಜನೆಗೊಂಡಿದೆ. ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಕೋರಿದ ಮಾನ್ಯ ಶಾಸಕರು, ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಕಲಿಕೆಯೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಇದು ಅತ್ಯಂತ ಸಹಕಾರಿ ಎಂದು ಬಣ್ಣಿಸಿದರು. ಕ್ರೀಡಾಕೂಟವು ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಅತಿ ಅವಶ್ಯಕವಾಗಿರುತ್ತದೆ. ಕ್ರೀಡೆಯಲ್ಲಿ ಉನ್ನತಿ ಸಾಧಿಸುವ ವಿದ್ಯಾರ್ಥಿಗಳು ಸಹಜವಾಗಿ ಓದುವಿನಲ್ಲೂ ಮುಂದೆ ಬರುತ್ತಾರೆ ಎಂದು ಹೇಳಿದರು.

ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಭಾಗವಹಿಸಿ ತಮ್ಮ ಸಾಮರ್ಥ್ಯವನ್ನು ನಾಡಿಗೆ ಪರಿಚಯಿಸುವಂಥಾಗಲಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಸರಕಾರ ಮಕ್ಕಳ ಆರೋಗ್ಯ ಕಡೆ ಅತ್ಯಂತ ಕಾಳಜಿ ವಹಿಸುತ್ತಿದ್ದು ಕ್ರೀಡೆಯು ಇದಕ್ಕೆ ಸಹಕಾರಿಯಾಗಲಿದೆ ಎಂದು ಬಣ್ಣಿಸಿದರು.

ಈ ಸಂದರ್ಭದಲ್ಲಿ ಕೆಡಿಪಿ ಸದಸ್ಯರಾದ ಬಾಚಮಾಂಡ ಲವ ಚಿಣ್ಣಪ್ಪ, ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ಪಂಚಾಯಿತಿ ಅಧ್ಯಕ್ಷರು ವನಜಾಕ್ಷಿ, ವಲಯ ಅಧ್ಯಕ್ಷರು ಕುಶು ಕುಶಾಲಪ್ಪ, ಸದಸ್ಯರು ಅರುಣ್ ಬೇಬಾ, ಸಾಬು ಕಾಳಪ್ಪ, ಕ್ಷೇತ್ರ ಶಿಕ್ಷಣ ಅಧಿಕಾರಿಗಳು, ಮಡಿಕೇರಿ ತಾಲೂಕಿನ 4ವಲಯದ ಬಾಲಕ ಬಾಲಕಿಯರು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.