ಕುಟ್ಟದಲ್ಲಿ 1ಕೋಟಿ 56 ಲಕ್ಷ ವೆಚ್ಚದ‌ ಪರಿಶಿಷ್ಟ ಪಂಗಡ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡ ‌ಕಾಮಗಾರಿಗೆ ಚಾಲನೆ ನೀಡಿದ ಶಾಸಕ‌ ಎಎಸ್ ಪೊನ್ನಣ್ಣ

Feb 28, 2026 - 20:37
 0  433
ಕುಟ್ಟದಲ್ಲಿ 1ಕೋಟಿ 56 ಲಕ್ಷ ವೆಚ್ಚದ‌ ಪರಿಶಿಷ್ಟ ಪಂಗಡ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡ ‌ಕಾಮಗಾರಿಗೆ ಚಾಲನೆ ನೀಡಿದ ಶಾಸಕ‌ ಎಎಸ್ ಪೊನ್ನಣ್ಣ

ಪೊನ್ನಂಪೇಟೆ; ಪರಿಶಿಷ್ಟ ಪಂಗಡ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡ ಕಾಮಗಾರಿಯ ಆರಂಭಕ್ಕೆ ಇಂದು ಕುಟ್ಟದಲ್ಲಿ ಭೂಮಿ ಪೂಜೆ ನೆರವೇರಿಸಲಾಯಿತು.

 ಭೂಮಿ ಪೂಜೆಯನ್ನು ನೆರವೇರಿಸಿ ಶುಭ ಕೋರಿದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಮಾತನಾಡುತ್ತಾ, ಈ ಭಾಗದಲ್ಲಿ ಶತಮಾನಗಳಿಂದ ವಾಸಿಸುತ್ತಿರುವ ಪರಿಶಿಷ್ಟ ಪಂಗಡದ ನೂರಾರು ಕುಟುಂಬಗಳಿವೆ. ಇಲ್ಲಿಯ ಮಕ್ಕಳ ಉತ್ತಮ ವಿದ್ಯಾಭ್ಯಾಸ ಹಾಗೂ ಆಧುನಿಕ ಸೌಲಭ್ಯಗಳೊಂದಿಗೆ ಉತ್ತಮ ವ್ಯಾಸಂಗ ಮಾಡಲು ಸರಕಾರ ಅನೇಕ ಸವಲತ್ತುಗಳನ್ನು ಕಲ್ಪಿಸುತ್ತಿದೆ. ಇದರ ಸದುಪಯೋಗವನ್ನು ಸಮಾಜದ ಬಾಂಧವರು ಪಡೆದುಕೊಳ್ಳಬೇಕೆಂದು ಕರೆ ನೀಡಿದರು.

ಈ ಕಾಮಗಾರಿಗೆ ₹ 1ಕೋಟಿ 56ಲಕ್ಷ ಅನುದಾನ ಒದಗಿ ಬಂದಿದ್ದು ಇದರಿಂದ ಉತ್ತಮ ಗುಣಮಟ್ಟದ ಕಟ್ಟಡ ನಿರ್ಮಾಣವಾಗಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರು ಮಂಡೆಪಂಡ ಸುಜಾ ಕುಶಾಲಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ತಿತೀರ ಧರ್ಮಜ ಉತ್ತಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ವೀಣಾ ಅಚ್ಚಯ್ಯ, ಬ್ಲಾಕ್ ಅಧ್ಯಕ್ಷರು ಮಿದೇರೀರ ನವೀನ್, ಹಿರಿಯರು ಪೆಮ್ಮಂಡ ಪೊನ್ನಪ್ಪ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಕಾಳಿಮಾಡ ಪ್ರಶಾಂತ್, ವಲಯ ಅಧ್ಯಕ್ಷರು ರಾಮಕೃಷ್ಣ, ಮಾಜಿ ಪಂಚಾಯಿತಿ ಸದಸ್ಯರು ಹಾಗೂ ಮಾಜಿ ವಲಯ ಅಧ್ಯಕ್ಷರಾದ ಮುಕಟೀರ ಅಯ್ಯಪ್ಪ, ಯುವ ಕಾಂಗ್ರೆಸ್ ನಾ ಫಾರ್ದಿನ್, ಪಕ್ಷದ ಮುಖಂಡರು ಕೆ ಬಾಡಗ ವಲಯ ಅಧ್ಯಕ್ಷರು ಚಿಮ್ಮಣ್ಣಮಾಡ ರವಿ, ನಾಲ್ಕೇರಿ ವಲಯ ಅಧ್ಯಕ್ಷರು ತಿತೀರ ಕಟ್ಟಿ ಕಾರ್ಯಪ್ಪ, ಅಣ್ಣಳ್ಳಮಾಡ ಹರೀಶ್ ಪೂವಯ್ಯ, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರು ಆಲೀರ ರಶೀದ್, ಕುಂಡಚ್ಚಿರ ಮಂಜು ದೇವಯ್ಯ, ಮನು, ಐಟಿಡಿಪಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0