ವಿರಾಜಪೇಟೆ ಉಪ ವಿಭಾಗದ ಸೆಸ್ಕ್ ಕಚೇರಿಯ ನೂತನ ಕಟ್ಟಡ ಕಾಮಗಾರಿಗೆ ಶಾಸಕ ಎಎಸ್ ಪೊನ್ನಣ್ಣ ಚಾಲನೆ
ವಿರಾಜಪೇಟೆ ಉಪ ವಿಭಾಗದ ಸೆಸ್ಕ್ ಕಚೇರಿಯ ನೂತನ ಕಟ್ಟಡದ ಶಿಲನ್ಯಾಸ ಕಾರ್ಯಕ್ರಮದಲ್ಲಿ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.
ವಿರಾಜಪೇಟೆ ಕ್ಷೇತ್ರದಿಂದ ವಿದ್ಯುತ್ ಗುಣಮಟ್ಟವನ್ನು ಉತ್ತಮಪಡಿಸಲು ಹಾಗೂ ನಿರಂತರ ವಿದ್ಯುತ್ ಸರಬರಾಜು ಗ್ರಾಹಕರಿಗೆ ಹಾಗೂ ರೈತರಿಗೆ ಒದಗಿಸಲು ಶಾಸಕರು ವಿಶೇಷ ಅನುದಾನ ತಂದಿದ್ದರು. ಇದರ ಭಾಗವಾಗಿ ಇಂದು ವಿರಾಜಪೇಟೆ ಉಪವಿಭಾಗದ ಕಚೇರಿಗೆ ನೂತನ ಕಟ್ಟಡ ನಿರ್ಮಿಸಿಕೊಡಲು ಭೂಮಿ ಪೂಜೆ ನೆರವೇರಿಸಿ, ಈ ಕಟ್ಟಡವು ಶೀಘ್ರ ಪೂರ್ಣಗೊಂಡು ಸಾರ್ವಜನಿಕರ ಬಳಕೆಗೆ ಲಭ್ಯವಾಗುವಂತಾಗಲಿ ಎಂದು ಹಾರೈಸಿದರು.
ಕಾಮಗಾರಿಯ ಬಗ್ಗೆ ಶಾಸಕರಿಗೆ ಮಾಹಿತಿ ನೀಡಿದ ಅಧಿಕಾರಿಗಳು, ಈ ಕಟ್ಟಡದ ಬಳಿ ತಡೆಗೋಡೆ ನಿರ್ಮಾಣ ಆಗಲಿದ್ದು, ₹ 1.39 ಕೋಟಿಯಲ್ಲಿ ಈ ಕಾಮಗಾರಿ ಕೈಗೊಳ್ಳಲಾಗಿದ್ದು, ನೂತನ ಕಟ್ಟಡಕ್ಕೆ ₹ 2.5 ಕೋಟಿ ಅನುದಾನ ಒದಗಿ ಬಂದಿದೆ ಎಂದು ತಿಳಿಸಿದರು.
ಎಲ್ಲಾ ಕಡೆ ಪವರ್ ಮ್ಯಾನ್ ದಿನಾಚರಣೆ ಆಚರಿಸುತ್ತಿದ್ದು ಮಾನ್ಯ ಶಾಸಕರು ಉತ್ತಮ ಗುಣಮಟ್ಟದ ವಿದ್ಯುತ್ ಸರಬರಾಜಿಗೆ ಹಗಲಿರುಳು ಶ್ರಮಿಸುತ್ತಿರುವ ಎಲ್ಲಾ ಪವರ್ ಮ್ಯಾನ್ ಗಳಿಗೆ ಶುಭಾಶಯಗಳು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ತಿತೀರ ಧರ್ಮಜ ಉತ್ತಪ್ಪ, ಬ್ಲಾಕ್ ಅಧ್ಯಕ್ಷರು ಹಾಗೂ ನಿಕಟಪೂರ್ವ ಪುರಸಭೆ ಸದಸ್ಯರು ಪಟ್ಟಡ ರಂಜಿ ಪೂಣಚ್ಚ, ಪ್ರಮುಖರಾದ ಕಲಿಯಂಡ ಸಂಪನ್ ಅಯ್ಯಪ್ಪ, ಕುಂಡಚ್ಚಿರ ಮಂಜು ದೇವಯ್ಯ, ಮಹಾದೇವ, ಚೆಕು, ನರೇಂದ್ರ ಕಾಮತ್, ನಾಸಿರ್, ಮಂಜುನಾಥ್, ಸಮದ್, ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.