ನಾಪೋಕ್ಲುವಿನಲ್ಲಿ ಹಲ್ಲೆಗೊಳಗಾದ ಯುವಕನ ಆರೋಗ್ಯ ವಿಚಾರಿಸಿದ ಶಾಸಕ ಎಎಸ್ ಪೊನ್ನಣ್ಣ

Feb 28, 2026 - 21:29
 0  1.6k
ನಾಪೋಕ್ಲುವಿನಲ್ಲಿ ಹಲ್ಲೆಗೊಳಗಾದ ಯುವಕನ ಆರೋಗ್ಯ ವಿಚಾರಿಸಿದ ಶಾಸಕ ಎಎಸ್ ಪೊನ್ನಣ್ಣ

ಮಡಿಕೇರಿ; ನಾಪೋಕ್ಲುವಿನಲ್ಲಿ ಶುಕ್ರವಾರ ಸಂಭವಿಸಿದ ಅಹಿತರ ಘಟನೆಯಲ್ಲಿ ಗಾಯಗೊಂಡಿದ್ದ ಗೌತಮ್ ರವರ ಆರೋಗ್ಯ ವಿಚಾರಿಸಲು, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದರು. ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೌತಮ್ ರವರ ಆರೋಗ್ಯ ವಿಚಾರಿಸುತ್ತಾ ಘಟನೆಯ ಬಗ್ಗೆ ಮಾಹಿತಿಯನ್ನು ಪಡೆದರು.

ಈ ಸಂದರ್ಭದಲ್ಲಿ ಮಾಧ್ಯಮದವರರಿಗೆ ಪ್ರತಿಕ್ರಿಯೆಸುತ್ತಾ ಮಾತನಾಡಿದ ಮಾನ್ಯ ಶಾಸಕರು, ಇಂತಹ ಘಟನೆ ನಡೆದಿರುವುದು ನಿಜಕ್ಕೂ ದುರಾದೃಷ್ಟಕರ ಮತ್ತು ಅತ್ಯಂತ ಖಂಡನೀಯ. ಕಾನೂನು ಶಿಕ್ಷೆಗೆ ಒಳಗಾಗಲಿದ್ದಾರೆ. ಘಟನೆ ನಡೆದ ಕೂಡಲೇ ಆರೋಪಿಗಳನ್ನು ಬಂಧಿಸಿದ ಪೊಲೀಸರ ಕ್ರಮವನ್ನು ಸ್ಲಾಧಿಸಿದ ಮಾನ್ಯ ಶಾಸಕರು ನಿಷ್ಪಕ್ಷಪಾತವಾಗಿ ತನಿಖೆ ಮಾಡಿ ಕಾನೂನು ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ವೀಣಾ ಅಚ್ಚಯ್ಯ, ಕೊಡಗು ಜಿಲ್ಲಾ ಸಾಮಾಜಿಕ ಜಾಲತಾಣದ ಅಧ್ಯಕ್ಷರು ಸೂರಜ್ ಹೊಸೂರು, ತೋಲoಡ ನಂದದೇವಯ್ಯ ,ಅಪ್ಪಚೆಟ್ಟೊಳoಡ ಮಿಥುನ್ ಮಾಚಯ್ಯ, ಕುಂಡಚ್ಚಿರ ಮಂಜು ದೇವಯ್ಯ, ಇಟೀರ ಭವಿನ್, ಪ್ರತೀಕ್ ಪೊನ್ನಣ್ಣ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 1
Angry Angry 1
Sad Sad 0
Wow Wow 0