ಗೋಣಿಕೊಪ್ಪ ಬಸ್ಸ್ ತಂಗುದಾಣದ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಎಎಸ್ ಪೊನ್ನಣ್ಣ

ಗೋಣಿಕೊಪ್ಪ ಬಸ್ಸ್ ತಂಗುದಾಣದ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಎಎಸ್ ಪೊನ್ನಣ್ಣ

ಗೋಣಿಕೊಪ್ಪ; ಶಾಸಕರು ಹಾಗೂ ಮುಖ್ಯಮಂತ್ರಿಗಳ ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಗೋಣಿಕೊಪ್ಪದಲ್ಲಿ ಪ್ರಗತಿಯಲ್ಲಿರುವ ಬಹು ನಿರೀಕ್ಷಿತ ಗೋಣಿಕೊಪ್ಪ ಬಸ್ ನಿಲ್ದಾಣದ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು.

ಈಗಾಗಲೇ ಮುಕ್ತಾಯ ಹಂತಕ್ಕೆ ಬಂದಿರುವ ಈ ಕಾಮಗಾರಿಯ ಅಂತಿಮ ಕೆಲಸ ಕಾರ್ಯಗಳ ಬಗ್ಗೆ ವರದಿ ಪಡೆದ ಮಾನ್ಯ ಶಾಸಕರು, ಇನ್ನು ಕೆಲವೇ ಸಮಯದಲ್ಲಿ ಈ ಬಸ್ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಬೇಕಾಗಿರುವುದರಿಂದ, ಕಾಮಗಾರಿಗಳನ್ನು ಶೀಘ್ರವಾಗಿ ಹಾಗೂ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಗುತ್ತಿಗೆದಾರರಿಗೆ ತಿಳಿಸಿದರು.

ಗೋಣಿಕೊಪ್ಪ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವ ಎಲ್ಲಾ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿದ ಮಾನ್ಯ ಶಾಸಕರು, ಕೆಲವು ಸಣ್ಣಪುಟ್ಟ ಮಾರ್ಪಾಡುಗಳನ್ನು ಗುತ್ತಿಗೆದಾರರಿಗೆ ನಿರ್ವಹಿಸಲು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ತಿತೀರ ಧರ್ಮಜ ಉತ್ತಪ್ಪ, ಪಂಚಾಯಿತಿ ಅಧ್ಯಕ್ಷರಾದ ಕುಲಚಂಡ ಪ್ರಮೋದ್ ಗಣಪತಿ, ಪಿ ಡಿ ಓ ತಿಮ್ಮಯ್ಯ, ನಾಯಂದಿರ ಶಿವಾಜಿ, ಕಂದ ದೇವಯ್ಯ, ಮುಕಟೀರ ಸಂದೀಪ್, ಹಾಗೂ ಪ್ರಮುಖರು ಉಪಸ್ಥಿತರಿದ್ದರು.