ಶಾದಿಮಹಲ್ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಎಎಸ್ ಪೊನ್ನಣ್ಣ
ವಿರಾಜಪೇಟೆ:,ತಾಲೂಕಿನ ನಲ್ವತೋಕ್ಲು ಭಾಗಕ್ಕೆ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣನವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ತಾವು ಒದಗಿಸಿದ ಅನುದಾನದಲ್ಲಿ ನಿರ್ಮಾಣವಾಗುತ್ತಿದ್ದ ಶಾದಿ ಮಹಲ್ ಕಾಮಗಾರಿಯ ಪ್ರಗತಿಯನ್ನು ವೀಕ್ಷಿಸಿದ ಮಾನ್ಯ ಶಾಸಕರು, ಇದೇ ಭಾಗದಲ್ಲಿ ನಿರ್ಮಾಣ ಆಗುತ್ತಿರುವ ತಡೆಗೋಡೆಯ ಕಾಮಗಾರಿಯನ್ನು ಸಹ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಘಟದ ಅಧ್ಯಕ್ಷರು ಹನೀಫ್ ಪಿ ಎ. ,ತಾಲೂಕು ಅಲ್ಪಸಂಖ್ಯಾತರ ಘಟದ ಅಧ್ಯಕ್ಷರು ರಫೀಕ್, ಬಿಲುಗುಂದ ವಲಯ ಅಧ್ಯಕ್ಷರು ನೌಫಲ್, ಹಿರಿಯ ಕಾಂಗ್ರೆಸ್ ಮುಖಂಡರು ಚೀಲವಂಡ ಕಾವೇರಪ್ಪ, ಜಿಲ್ಲಾ ಕಾರ್ಯದರ್ಶಿ, ಕೆ ಎಂ ಬಾವ ಮಸೀದಿ ಆಡಳಿತ ಮಂಡಳಿ ಸದಸ್ಯರು, ಗ್ರಾಮಸ್ಥರು , ಬಿಲುಗುಂದ, ಹೊಸಕೋಟೆ, ನಲ್ವತೋಕುಲು ಕಾಂಗ್ರೆಸ್ ಕಾರ್ಯಕರ್ತರು, ಹಾಗೂ ಪ್ರಮುಖರು ಉಪಸ್ಥಿತರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
