ಬೆಟ್ಟಗೇರಿಯಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಎಎಸ್ ಪೊನ್ನಣ್ಣ
admincoorgdaily

ಮಡಿಕೇರಿ:ತಾಲೂಕಿನ ಬೆಟ್ಟಗೇರಿಯಲ್ಲಿ ಶಾಸಕರ ಸ್ಪೆಷಲ್ ಗ್ರಾಂಟ್ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಕೆ.ಆರ್.ಐ.ಡಿ ಎಲ್ ಸಂಸ್ಥೆ ಮೂಲಕ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 40 ಕೋಟಿ ವೆಚ್ಚದಲ್ಲಿ ಒಟ್ಟು 252 ಕಾಮಗಾರಿಗಳನ್ನು ಎ.ಎಸ್.ಪೊನ್ನಣ್ಣ ನವರು ಜನರ ಕೋರಿಕೆಯ ಮೇರೆಗೆ ಗುರುತಿಸಿ ಅನುದಾನದ ಹಂಚಿಕೆ ಮಾಡಿದ್ದಾರೆ.ಕ್ಷೇತ್ರದ ಕಟ್ಟಕಡೆಯ ವ್ಯಕ್ತಿಗೂ ಮೂಲಭೂತ ವ್ಯವಸ್ಥೆ ದೊರಕಬೇಕು ಎಂಬ ಆಶಯದೊಂದಿಗೆ ಆದ್ಯತೆ ಮೇರೆಗೆ ಗ್ರಾಮೀಣ ಪ್ರದೇಶಗಳನ್ನು ಗುರಿಯಾಗಿಸಿ ಕಾಮಗಾರಿಗೆ ಅನುದಾನ ಒದಗಿಸಲಾಗಿದೆ.
ಸಾರ್ವಜನಿಕರಿಂದ ಮತ್ತಷ್ಟು ಕೋರಿಕೆಗಳು ಸಲ್ಲಿಕೆಯಾಗಿದ್ದು ಅವುಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಎ.ಎಸ್.ಪೊನ್ನಣ್ಣ ನವರು ಮಾಹಿತಿ ನೀಡಿದರು.
ಈ ಸಂಧರ್ಭದಲ್ಲಿ ನಾಪೊಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಕೊಡಗನ ತೀರ್ಥ ಪ್ರಸಾದ್,ಅಲ್ಪ ಸಂಖ್ಯಾತ ಘಟಕದ ಜಿಲ್ಲಾ ಅಧ್ಯಕ್ಷ ರಾದ ಹನೀಫ್,ಬೆಟ್ಟಗೇರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಚಳಿಯಂಡ ಕಮಲಾ ಉತ್ತಯ್ಯ,ಮಾಜಿ ಮಂಡಲ ಪ್ರಧಾನರಾದ ಮುಂಜಾಂದಿರ ಚಿಕ್ಕು ಕಾರ್ಯಪ್ಪ,ಕೇಟೋಳಿ ಮೋಹನ್ ರಾಜ್, ಅಪ್ರು ರವೀಂದ್ರ,ಹೊಸೂರು ಸೂರಜ್,ಪಿ.ಎಲ್.ಸುರೇಶ್, ವಲಯ ಕಾರ್ಯದರ್ಶಿ ಮಜೀದ್,ಬೊಳ್ದಂಡ ನಾಚಪ್ಪ,ಮಹಮದ್ ಕುಂಞ,ಮುಂಜಾಂದಿರ ಅಜಿತ್,ತೋರೆರ ಮುದ್ದಯ್ಯ,
ಮುಂಜಾಂದಿರ ಸದಾ,ಕಾಳೇರಮ್ಮನ ಕುಮಾರ್, ಪಟ್ಟಡ ದೀಪಕ್,ಮೊಯ್ದು ಬೆಟ್ಟಗೇರಿ,ಹನೀಫ್ ಸಂಪಾಜೆ,ರಘು,ಮುಂಜಾಂದಿರ ಬೋಪಣ್ಣ,ಕೊಕ್ಕಂಡ ಚಂಗಪ್ಪ,ಪುದಿನೆರವನ ಆಶಾ,ಗಣೇಶ್,ಗುತ್ತಿಗೆದಾರ ನರೆನ್ ಸೋಮಯ್ಯ,ಅರ್ಚಕರಾದ ದೇವಿಪ್ರಸಾದ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.