ಸಚಿವ ಜಮೀರ್ ಅಹ್ಮದ್ ಅವರನ್ನು ಭೇಟಿಯಾದ ಶಾಸಕ ಎಎಸ್ ಪೊನ್ನಣ್ಣ:ವಿರಾಜಪೇಟೆ ಕ್ಷೇತ್ರದ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಬಿಡುಗಡೆ ಮಾಡುವ ಕುರಿತು ಚರ್ಚೆ

Dec 2, 2025 - 23:43
 0  499
ಸಚಿವ ಜಮೀರ್ ಅಹ್ಮದ್ ಅವರನ್ನು ಭೇಟಿಯಾದ ಶಾಸಕ ಎಎಸ್ ಪೊನ್ನಣ್ಣ:ವಿರಾಜಪೇಟೆ ಕ್ಷೇತ್ರದ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಬಿಡುಗಡೆ ಮಾಡುವ ಕುರಿತು ಚರ್ಚೆ

ಬೆಂಗಳೂರು:ವಿರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರ ಮುತುವರ್ಜಿಯಿಂದ ಅಲ್ಪಸಂಖ್ಯಾತರ ಸಚಿವರಾದ ಬಿ.ಝೆಡ್ ಜಮೀರ್ ಅಹ್ಮದ್ ಖಾನ್ ರವರೊಂದಿಗೆ, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಭೇಟಿಯಾಗಿ, ಕ್ಷೇತ್ರದ ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಅನುದಾನ ಒದಗಿಸುವಲ್ಲಿ ಮತ್ತು ವಕ್ಫ್ ಇಲಾಖೆಯಿಂದ ಮಸೀದಿ, ಮದರಸಾ ಹಾಗೂ ಚರ್ಚ್ ಅಭಿವೃದ್ಧಿಗಳಿಗೆ ಮಂಜೂರಾಗಬೇಕಾದ ಎಲ್ಲಾ ಅನುದಾನಗಳನ್ನು ಬಿಡುಗಡೆಗೊಳಿಸುವ ಬಗ್ಗೆ ಚರ್ಚಿಸಲಾಯಿತು. ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದರು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ಹನೀಫ್, ವಿರಾಜಪೇಟೆ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ಕೋಳುಮಂಡ ರಫೀಕ್ ರವರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0