State News

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಶಾಸಕ ಎಎಸ್ ಪೊನ್ನಣ್ಣ

admincoorgdaily

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಶಾಸಕ ಎಎಸ್ ಪೊನ್ನಣ್ಣ

ಬೆಂಗಳೂರು:ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಭೇಟಿಯ ಸಂದರ್ಭದಲ್ಲಿ ಶಾಸಕ ಪೊನ್ನಣ್ಣ ಅವರು, ತಮಗೆ ಈ ಮಹತ್ವದ ಜವಾಬ್ದಾರಿ ನೀಡಿರುವುದಕ್ಕೆ ಸಿದ್ದರಾಮಯ್ಯ ಅವರ ಸಹಕಾರ, ಬೆಂಬಲ ಹಾಗೂ ಆಶೀರ್ವಾದಕ್ಕೆ ಕೃತಜ್ಞತೆಯನ್ನು ಸಲ್ಲಿಸಿದರು.