ಕನ್ನಡ ಚಿತ್ರರಂಗದ ನಿರ್ಮಾಪಕರಾದ ಸಂದೇಶ್ ನಾಗರಾಜ್ ಅವರ 80ನೇ ವರ್ಷದ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

ಮೈಸೂರು:ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಸಂದೇಶ್ ನಾಗರಾಜ್ ರವರ 80ನೇ ವರ್ಷದ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿ ಶುಭ ಕೋರಿದರು. ಮೈಸೂರಿನ ವಸ್ತು ಪ್ರದರ್ಶನ ಮೈದಾನದಲ್ಲಿ ಆಯೋಜನೆಗೊಂಡ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿದ ಶಾಸಕರು, ಕನ್ನಡ ಚಿತ್ರರಂಗಕ್ಕೆ ಸಂದೇಶ್ ನಾಗರಾಜ್ ರವರು ನೀಡಿದ ಕೊಡುಗೆಯನ್ನು ಸ್ಮರಿಸುತ್ತಾ, ಶುಭ ಹಾರೈಸಿ ಅಮೂಲ್ಯ ಸಮಯವನ್ನು ಕಳೆದರು.