ಸಿಹಿ ಹಂಚಿ‌ ಮಕ್ಕಳೊಂದಿಗೆ ಮಕ್ಕಳ ದಿನಾಚರಣೆಯ ಸಂಭ್ರಮದಲ್ಲಿ ಭಾಗವಹಿಸಿದ ಶಾಸಕ‌ ಎಎಸ್ ಪೊನ್ನಣ್ಣ

ಸಿಹಿ ಹಂಚಿ‌ ಮಕ್ಕಳೊಂದಿಗೆ ಮಕ್ಕಳ ದಿನಾಚರಣೆಯ ಸಂಭ್ರಮದಲ್ಲಿ ಭಾಗವಹಿಸಿದ ಶಾಸಕ‌ ಎಎಸ್ ಪೊನ್ನಣ್ಣ

ವಿರಾಜಪೇಟೆ: ಇಲ್ಲಿನ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಇಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಿಕೊಂಡರು.

 ಪೂರ್ವಾ ನಿಗದಿತ ಕಾರ್ಯಕ್ರಮದಡೆಗೆ ತೆರಳುವ ಸಂದರ್ಭದಲ್ಲಿ ಈ ಶಾಲೆಗೆ ಭೇಟಿ ನೀಡಿದ ಶಾಸಕರು, ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆಯ ಶುಭಾಶಯಗಳು ಕೋರುತ್ತಾ ಸಿಹಿ ಹಂಚಿ ಮಕ್ಕಳೊಂದಿಗೆ ಸಂಭ್ರಮಿಸಿದರು. ಇದೇ ಸಂದರ್ಭದಲ್ಲಿ ಪಂಡಿತ್ ಜವಾಹರ್ ಲಾಲ್ ನೆಹರುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಶಾಲೆಯ ಪ್ರಾಧ್ಯಾಪಕರೊಂದಿಗೆ ಮಾತನಾಡುತ್ತಾ ಮಕ್ಕಳಿಗೆ ದೊರಕುತ್ತಿರುವ ಎಲ್ಲಾ ಸೌಲತ್ತುಗಳ ಬಗ್ಗೆ ಮಾಹಿತಿ ಪಡೆದರು.

 ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ಹನೀಫ್, ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ರಫೀಕ್, ಪಕ್ಷದ ಮುಖಂಡರು ಜೋಕಿಮ್, ಸೂರಜ್ ಹೊಸೂರು,ಮಂಜುನಾಥ್, ನರೇಂದ್ರ ಕಾಮತ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರು ಜಮ್ಮಡ ಸೋಮಣ್ಣ, ಶಬೀರ್, ಸಫನ್, ಹಾಗೂ ಶಿಕ್ಷಕ ವೃಂದದವರು ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.