ಸಂವಿಧಾನ ದಿನಾಚರಣೆಯಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

Nov 26, 2025 - 16:39
 0  89
ಸಂವಿಧಾನ ದಿನಾಚರಣೆಯಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

ಬೆಂಗಳೂರು:ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ಸಂವಿಧಾನ ಪೀಠಿಕೆಗೆ ಪುಷ್ಪ ನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಕಾನೂನು ಸಚಿವ ಎಚ್.ಕೆ. ಪಾಟೀಲ್, ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ , ಕಾರ್ಯಾಧ್ಯಕ್ಷ ಜಿಸಿ ಚಂದ್ರಶೇಖರ್ ,ಮಾಜಿ ಸಚಿವ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್ ಎಂ ರೇವಣ್ಣ, ಕಾನೂನು ಘಟಕದ ರಾಜ್ಯಾಧ್ಯಕ್ಷರಾದ ಸಿ.ಎಂ ಧನಂಜಯ ಮತ್ತಿತರರು ಉಪಸ್ಥಿತರಿದ್ದರು.

 ಇದೆ ಸಂದರ್ಭದಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಸಹ ಪುಷ್ಪಾರ್ಚನೆ ಮಾಡಿ ಪವಿತ್ರ ಸಂವಿಧಾನಕ್ಕೆ ವಂದಿಸಿ ಗೌರವ ನಮನ ಸಲ್ಲಿಸಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0