ವಿರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ಗಣೇಶೋತ್ಸವ ಹಾಗೂ ಪುರಸಭೆ ಕಾರ್ಮಿಕರ ಕ್ರೀಡಾಕೂಟದಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

ವಿರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ಗಣೇಶೋತ್ಸವ ಹಾಗೂ ಪುರಸಭೆ ಕಾರ್ಮಿಕರ ಕ್ರೀಡಾಕೂಟದಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

ವಿರಾಜಪೇಟೆ: ವಿರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ, ಗಣೇಶೋತ್ಸವ ಕಾರ್ಯಕ್ರಮ ಹಾಗೂ ಪುರಸಭೆ ಕಾರ್ಮಿಕರಿಗಾಗಿ ಆ ಯೋಜನೆಗೊಂಡ ಕ್ರೀಡಾಕೂಟದಲ್ಲಿ ಅತಿಥಿಯಾಗಿ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.

 ವಿರಾಜಪೇಟೆ ಪುರಭವನ ಆವರಣದಲ್ಲಿ ನಡೆದ ಕ್ರೀಡಾಕೂಟಕ್ಕೆ ಶುಭ ಕೋರುತ್ತಾ ಮಾತನಾಡಿದ ಶಾಸಕರು, ಪುರಸಭಾ ವ್ಯಾಪ್ತಿಯ ಎಲ್ಲಾ ಕೆಲಸಕಾರ್ಯಗಳಲ್ಲಿ ನಿರಂತರವಾಗಿ ತಮ್ಮನ್ನು ತೊಡಗಿಸಿಕೊಂಡು ದುಡಿಯುವ ಕಾರ್ಮಿಕರಿಗೆ ಇಂತಹ ಕ್ರೀಡಾಕೂಟ ಬದಲಾವಣೆಯನ್ನು ನೀಡುತ್ತದೆ. ತಮ್ಮ ಒತ್ತಡದ ಜೀವನದ ನಡುವೆಯೂ ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ ಪುರಸಭೆ ಕಾರ್ಮಿಕರನ್ನು ಶ್ಲಾಘಿಸಿದ ಶಾಸಕರು, ಎಲ್ಲರಿಗೂ ಶುಭವಾಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ಪುರಸಭೆ ಅಧ್ಯಕ್ಷರಾದ ದೇಚಮ್ಮ ಕಾಳಪ್ಪ, ಪುರಸಭೆ ಸದಸ್ಯರು, ಪಕ್ಷದ ಪ್ರಮುಖರು, ಪುರಸಭೆ ಕಾರ್ಮಿಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.