ನಾಪೋಕ್ಲು-ಕಾಟಕೇರಿಯಲ್ಲಿ ಗೌರಿ-ಗಣೇಶೋತ್ಸವದಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

ನಾಪೋಕ್ಲು-ಕಾಟಕೇರಿಯಲ್ಲಿ ಗೌರಿ-ಗಣೇಶೋತ್ಸವದಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

ನಾಪೋಕ್ಲು: ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕಿನ ನಾಪೋಕ್ಲು, ಕಾಟಕೇರಿಯಲ್ಲಿ ಆಯೋಜನೆಗೊಂಡ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು*ಭಾಗವಹಿಸಿದರು. ವಿವಿಧ ಗಣಪತಿ ಮಂಟಪಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಶಾಸಕರು, ವಿಘ್ನ ನಿವಾರಕ ಶ್ರೀ ಗಣೇಶನ ನಾಡಿನ ಸರ್ವರಿಗೂ ಒಳಿತನ್ನು ಮಾಡಲಿ ಎಂದು ಪ್ರಾರ್ಥಿಸಿದರು. ಆಯೋಜಕರಿಂದ ಸನ್ಮಾನವನ್ನು ಸ್ವೀಕರಿಸಿದ ಶಾಸಕರು, ಎಲ್ಲೆಡೆ ವಿಜೃಂಭಣೆಯಿಂದ ಆಚರಿಸಲ್ಪಡುತ್ತಿರುವ ಶ್ರೀ ಗಣೇಶ ಉತ್ಸವವು, ಶಾಂತಿ-ಸೌಹಾರ್ದತೆ ಹಾಗೂ ಸಹಬಾಳ್ವೆಯ ಸಂದೇಶವನ್ನು ನಾಡಿನಾದ್ಯಂತ ಸಾರಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್, ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಪಕ್ಷದ ಪ್ರಮುಖರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.